ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ನೇಮಕಾತಿ ಆದೇಶ ಪತ್ರ ಸ್ವೀಕರಿಸಿದ ಪ್ರವೀಣ್ ನೆಟ್ಟಾರು ಪತ್ನಿ ನೂತನ – Vishwanews24
ಮಂಗಳೂರು : ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ನೇಮಕಾತಿ ಆದೇಶ ಪತ್ರ ಸ್ವೀಕರಿಸಿದ ಪ್ರವೀಣ್ ನೆಟ್ಟಾರು ಪತ್ನಿ ನೂತನ
ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಗೆ ಒಳಗಾದ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ಇಂದಿನಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶ ಪತ್ರವನ್ನು ಅವರು ಸ್ವೀಕರಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಸಹಾಯಕಿಯಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ. ನೂತನಕುಮಾರಿ ಅವರಿಗೆ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ‘ಸಿ’ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಆದರೆ, ಅವರು ಮಂಗಳೂರಿನಲ್ಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿನಂತಿಸಿಕೊಂಡ ಕಾರಣ, ಅವರ ಇಚ್ಛೆಯಂತೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.
