ಮಂಗಳೂರು: ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ  ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಜು.26ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ  ರಜೆ ಘೋಷಣೆ : ಜಿಲ್ಲಾಧಿಕಾರಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್ ಘೋಷಣೆಯಾಗಿದೆ.

ಈ ಹಿನ್ನಲೆ ಹವಮಾನ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜು.26ರಂದು ರಜೆ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವಿಪೂರ್ವಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.26ರ ಬುಧವಾರ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Leave a Reply