ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ – vishwanews24
ಮಂಗಳೂರು : ಜೈಲಿನಲ್ಲಿ ಗಲಾಟೆ ;ಅಡುಗೆಮನೆ ಸ್ಫೋಟಿಸುವುದಾಗಿ ಕೈದಿ ಬೆದರಿಕೆ
ಮಂಗಳೂರು,: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ ಕೈದಿಯೊಬ್ಬ ಗ್ಯಾಸ್ ಸಿಲಿಂಡರ್ ಹಿಡಿದು ಗೇಟ್ ಹಾಗೂ ಬೀಗಕ್ಕೆ ಹೊಡೆದು, ಗೇಟ್ ತೆರೆಯುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
ಜೈಲು ಅಧಿಕಾರಿಗಳು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಸಂದರ್ಭದಲ್ಲಿ ಫೈಜಲ್ ಎಂಬಾತ ಸಮೀಪದಲ್ಲಿದ್ದ ಗ್ಯಾಸ್ ಸಿಲಿಂಡರ್ನ್ನು ತೆಗೆದುಕೊಂಡು ಗೇಟ್ ಮತ್ತು ಬೀಗಕ್ಕೆ ಹೊಡೆಯಲು ಆರಂಭಿಸಿದ್ದಾನೆ ಎನ್ನಲಾಗಿದೆ. ಜೋರಾಗಿ ಕೂಗುತ್ತಾ ಗೇಟ್ ತೆರೆಯುವಂತೆ ಒತ್ತಾಯಿಸಿದ ಆತ, ಇಲ್ಲದಿದ್ದರೆ ಗ್ಯಾಸ್ ಸಿಲಿಂಡರ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೆಳ್ತಂಗಡಿ: ಗಡಾಯಿಕಲ್ಲು ಚಾರಣಕ್ಕೆ ಮುಕ್ತ ; ದಿನಕ್ಕೆ 500 ಪ್ರವಾಸಿಗರಿಗೆ ಮಾತ್ರ ಅವಕಾಶ – vishwanews24
ಬಳಿಕ ಆರೋಪಿಗಳು ಇತರ ಕೈದಿಗಳನ್ನು ಪ್ರಚೋದಿಸಿ ಒಟ್ಟುಗೂಡಿಸಿದ್ದು, ಬೀಡಿಗಳನ್ನು ನೀಡುವವರೆಗೆ ತಮ್ಮ ಸೆಲ್ಗಳಿಗೆ ಹಿಂತಿರುಗದಂತೆ ಪ್ರೇರೇಪಿಸಿದ್ದಾರೆ ಎನ್ನಲಾಗಿದೆ. ಇದರಿಂದ ಜೈಲಿನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಜೈಲು ಅಧಿಕಾರಿಗಳು ಕರ್ತವ್ಯ ನಿರ್ವಹಿಸಲು ಅಡ್ಡಿಯುಂಟಾಗಿದೆ ಎಂದು ಆರೋಪಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
