ಮಂಗಳೂರು: ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ – ಮೃತ ಮಶೂದ್ ಮತ್ತು ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಿ : ಖಾದರ್ ಒತ್ತಾಯ – Vishwanews24
ಮಂಗಳೂರು: ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ – ಮೃತ ಮಶೂದ್ ಮತ್ತು ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಿ : ಖಾದರ್ ಒತ್ತಾಯ
ಮಂಗಳೂರು: ಬೆಳ್ಳಾರೆ ಪ್ರವೀಣ್ ಕುಮಾರ್ ಹತ್ಯೆಯನ್ನು ಶಾಸಕ ಯು.ಟಿ.ಖಾದರ್ ಖಂಡಿಸಿದ್ದು ತಪ್ಪಿತಸ್ಥರನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಮೃತ ಮಶೂದ್ ಮತ್ತು ಪ್ರವೀಣ್ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಈ ಸರಕಾರದಲ್ಲಿ ಜನಸಾಮಾನ್ಯರಿಗೂ ರಕ್ಷಣೆ ನೆಮ್ಮದಿಯ ವಾತಾವರಣ ಇಲ್ಲ. ಇದಕ್ಕೆ ಇತ್ತೀಚೆಗೆ ಸಮಾಜ ಘಾತುಕ ಶಕ್ತಿಗಳು,ಕೊಲೆಗಡುಕರಿಗೆ ಸರಕಾರದ ಭಯವಿಲ್ಲ ಎಂಬುದು ಕೆಲವು ದಿನಗಳಲ್ಲಿ ಆದಂತಹ ಘಟನೆಗಳೇ ಸಾಕ್ಷಿಯಾಗಿದೆ. .ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳ ಅವಧಿಯಲ್ಲಿ ಮಸೂದ್ ಮತ್ತು ಪ್ರವೀಣ್ ಹತ್ಯೆಯಾಗಿದ್ದು ಅತ್ಯಂತ ನೋವಿನ ವಿಚಾರವಾಗಿದ್ದು ಗೂಂಡಾಗಳಿಗೆ,ಕೊಲೆಗಡುಕರಿಗೆ ಸರಕಾರ ಮತ್ತು ಕಾನೂನಿನ ಭಯವಿಲ್ಲ ಎಂದು ಇದರಿಂದ ಸಾಬೀತಾಗಿದೆ. ಈ ಹಿಂದೆ ಆದ ಘಟನೆಯನ್ನು ಸೂಕ್ಷ್ಮತೆಯನ್ನು ಅರಿತುಕೊಂಡು ಮುಂಜಾಗ್ರತೆ ಮಾಡುವ ಜವಾಬ್ದಾರಿ ಸರಕಾರ ಮತ್ತು ಪೊಲೀಸ್ ಇಲಾಖೆಯದ್ದಾಗಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಕೊಲೆಗಡುಕರ ಪಕ್ಷ,ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು : ಸಿದ್ದರಾಮಯ್ಯ – Vishwanews24
ನಿನ್ನೆ ನಡೆದ ಪ್ರವೀಣ್ ಹತ್ಯೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಶಾಸಕ ಯು.ಟಿ.ಖಾದರ್,ಈ ಎಲ್ಲಾ ಘಟನೆಗಳನ್ನು ಭೇದಿಸುವುದರ ಮೂಲಕ ನೈಜ ಅಪರಾಧಿಗಳನ್ನು ಆದಷ್ಟು ಬೇಗನೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿಯೂ ಸರಕಾರ ಮೃತ ಮಶೂದ್ ಮತ್ತು ಪ್ರವೀಣ್ ರವರ ಕುಟುಂಬಕ್ಕೆ ಗರಿಷ್ಠ ಮೊತ್ತದ ಪರಿಹಾರ ನೀಡಬೇಕೆಂದು ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದ್ದಾರೆ.
ಎಲ್ಲಾ ಜಾತಿ,ಮತ,ವರ್ಗದವರು ಒಂದಾಗಿ ಯಾರೇ ಸಮಾಜ ಘಾತುಕ ಶಕ್ತಿಗಳು,ಕೊಲೆಗಡುಕರು ಆಗಲಿ ಅವರ ವಿರುದ್ಧ ಹೋರಾಡಲು ಒಟ್ಟಾಗಿ ಮುಂದಾಗಬೇಕು ಮತ್ತು ಇಂತಹ ಕೃತ್ಯ ನಡೆಸಿದವರನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಮಾಜದಲ್ಲಿ ಒಟ್ಟಾಗಿ ಒಂದಾಗಿ ಸಂಪೂರ್ಣ ಸಹಕಾರ ಕೊಡಬೇಕೆಂದು ಯು.ಟಿ.ಖಾದರ್ ಪತ್ರಿಕಾ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಪಕ್ಷದ ಕಾರ್ಯಕರ್ತರಿಗೆ ರಕ್ಷಣೆ ನೀಡದ ಬಿಜೆಪಿ ಸರಕಾರ ಸಾಮಾನ್ಯರಿಗೆ ನೀಡಿತೇ? – ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್
