ಮಂಗಳೂರು : ನೈತಿಕ ಪೊಲೀಸ್ ಗಿರಿ ಪ್ರಕರಣ : ಬಂಧಿತ ಆರೋಪಿಗಳ ಸಂಖ್ಯೆ 5 ಕ್ಕೆ ಏರಿಕೆ – Vishwanews24
ಮಂಗಳೂರು : ನೈತಿಕ ಪೊಲೀಸ್ ಗಿರಿ ಪ್ರಕರಣ : ಬಂಧಿತ ಆರೋಪಿಗಳ ಸಂಖ್ಯೆ 5 ಕ್ಕೆ ಏರಿಕೆ
ಮಂಗಳೂರು : ಮಂಗಳೂರಿನ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ 3 ತಂಡಗಳನ್ನು ರಚಿಸಿ ತನಿಖೆ ಶುರು ಮಾಡಿದ್ದು, ಓರ್ವ ಅಪ್ರಾಪ್ತ ಸೇರಿದಂತೆ ಐವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ಬಸ್ತಿಪಾಡು ಯತೀಶ್, ತಲಪಾಡಿ ನಿವಾಸಿ ಸಚಿನ್, ಸುಹಾನ್, ಅಖಿಲ್ ಹಾಗೂ ಓರ್ವ ಅಪ್ರಾಪ್ತನನ್ನು ಉಳ್ಳಾಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 307, ಗಲಭೆ ಸೃಷ್ಟಿ ಆರೋಪದಡಿ ಪ್ರಕರಣ ದಾಖಲಾಗಿದೆ.
ಖಾಸಗಿ ವಿದ್ಯಾಸಂಸ್ಥೆಗೆ ಸೇರಿದ ಕೇರಳ ಮೂಲದ ಆರು ಮಂದಿ ವಿದ್ಯಾರ್ಥಿಗಳು ವಿಹಾರಕ್ಕೆಂದು ಬಂದಿದ್ದ ವೇಳೆ ಮೂವರು ವಿದ್ಯಾರ್ಥಿಗಳು ಅನ್ಯಕೋಮಿಗೆ ಸೇರಿದ್ದಾರೆ ಎಂದು ಗಮನಿಸಿ, ತಂಡವೊಂದು ಇವರನ್ನು ಹಿಂಬಾಲಿಸಿದೆ. ಬಳಿಕ ಸೋಮೇಶ್ವರ ಬೀಚ್ ನಲ್ಲಿ ವಿಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದೆ. ದಾಳಿಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
