ಮಂಗಳೂರು: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಕಾಲೇಜಿನ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡಿದ್ದರು :  ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಕಾಲೇಜಿನ ಹಾಸ್ಟೆಲ್‌ನಿಂದ ವಿದ್ಯಾರ್ಥಿನಿಯರು ನಾಪತ್ತೆ :  ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್

ಮಂಗಳೂರು: ಸೆ.21 ರಂದು ನಗರದ ಕಾಲೇಜುವೊಂದರ ಹಾಸ್ಟೆಲ್‌ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದು, ಸುರಕ್ಷಿತವಾಗಿ ಮಂಗಳೂರಿಗೆ ವಾಪಾಸ್ ಆಗಿದ್ದಾರೆ.

ಮಂಗಳೂರು : ಖಾಸಗಿ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ – Vishwanews24

ಈ ಬಗ್ಗೆ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಮಾಹಿತಿ ಕೊಟ್ಟಿದ್ದು, ಕಾಲೇಜಿನ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣ ಸೆ.21 ರಂದು ಕಾಲೇಜಿನ ಹಾಸ್ಟೆಲ್‌ನಿಂದ ಮೂವರೂ ತಪ್ಪಿಸಿಕೊಂಡು ಹೊರಟಿದ್ದರು.

ಇದನ್ನೂ ಓದಿ : ಸಮಸ್ಯೆ ಗಳಿಗೆ ಶೀಘ್ರ ಪರಿಹಾರ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಹಾಸ್ಟೆಲ್‌ನಿಂದ ಹೊರಟ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿತ್ತು. ಪೊಲೀಸರು ವಿವರಗಳನ್ನು ಕಲೆಹಾಕಿದಾಗ ರೈಲ್ವೇ ಸ್ಟೇಷನ್‌ಗೆ ವಿದ್ಯಾರ್ಥಿನಿಯರು ಹೋದದ್ದು ತಿಳಿದುಬಂದಿತ್ತು. ಪೊಲೀಸರ ತಂಡ ತಮಿಳುನಾಡಿಗೆ ತೆರಳಿ ವಿದ್ಯಾರ್ಥಿನಿಯರನ್ನು ಪತ್ತೆ ಮಾಡಿದ್ದಾರೆ. ಕಡಿಮೆ ಅಂಕ ಬಂದ ಕಾರಣ ಬೇಸರದಲ್ಲಿ ಹಾಗೂ ಒತ್ತಡದಿಂದ ವಿದ್ಯಾರ್ಥಿನಿಯರು ತಪ್ಪಿಸಿಕೊಂಡಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ..

Leave a Reply