ಮಂಗಳೂರು: ಪರೇಶ್ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್ ಆಗ್ರಹ – Vishwanews24
ಮಂಗಳೂರು: ಪರೇಶ್ ಮೇಸ್ತ ಪ್ರಕರಣ – ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು : ಯು.ಟಿ.ಖಾದರ್ ಆಗ್ರಹ
ಮಂಗಳೂರು: ಕರಾವಳಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಪರೇಶ್ ಮೇಸ್ತ ಸಾವು, ಕೊಲೆಯಲ್ಲ ಆಕಸ್ಮಿಕ ಸಾವು ಎಂದು ಸಿಬಿಐ ವರದಿ ನೀಡಿದೆ. ಈ ಬಗ್ಗೆ ಬಿಜೆಪಿ ಮುಖಂಡರು ಮೌನ ವಹಿಸುವ ಬದಲು ರಾಜ್ಯದ ಜನತೆಯ ಕ್ಷಮೆ ಯಾಚಿಸಬೇಕು ಎಂದು ಯು.ಟಿ.ಖಾದರ್ ಆಗ್ರಹಿಸಿದರು.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಾವಿನ ಮನೆಯಲ್ಲಿ ರಾಜಕೀಯ ಮಾಡುತ್ತಿದೆ. ಇದಕ್ಕೆ ಪರೇಶ್ ಮೇಸ್ತ ಸಾವಿನ ಪ್ರಕರಣವೇ ಸಾಕ್ಷಿಯಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಬಿಜೆಪಿ ರಾಜಕೀಯ ಮಾಡುತ್ತಲೇ ಬಂದಿದೆ ಎಂದು ದೂರಿದ್ದಾರೆ.
ದುಬೈನಿಂದ ಹಿಂದಿರುಗುತ್ತಿದ್ದ ವೇಳೆ ಹೃದಯಾಘಾತ : ಮಂಗಳೂರು ವಿಮಾನ ನಿಲ್ದಾಣದಲ್ಲಿ ವ್ಯಕ್ತಿ ಸಾವು – Vishwanews24
