ಮಂಗಳೂರು ಪಾಲಿಕೆ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಮತದಾನ..!

Featured, ದಕ್ಷಿಣ ಕನ್ನಡ

ಮಂಗಳೂರು: ಇಂದು ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್​​​ ಮತದಾನ ಮಾಡಿದ್ದಾರೆ.

ಮಂಗಳೂರು ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಟೀಲ್ ಮತದಾನ ಮಾಡಿದ್ರು. ಬಳಿಕ ಮಾತನಾಡಿದ ಅವರು, ಈ ಬಾರಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಕಳೆದ ಬಾರಿ ಪಾಲಿಕೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಕಾಂಗ್ರೆಸ್ ನಲ್ಲಿ ಒಳ ಜಗಳ ನಡೆದಿದ್ದು, ಇದು ಬಿಜೆಪಿಗೆ ವರದಾನವಾಗಲಿದೆ. ಹಾಗಾಗಿ ಈ ಬಾರಿ ಬಿಜೆಪಿ ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲಿದೆ ಅಂತಾ ನಳೀನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ರು.