ಮಂಗಳೂರು : ಬಿಜೆಪಿ ಸದಸ್ಯತ್ವ ಪಡೆದುಕೊಂಡ ತುಳುನಾಡ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ – vishwanews24
ಮಂಗಳೂರು: ಬಿಜೆಪಿ ಸದಸ್ಯತ್ವ ಪಡೆದುಕೊಂಡ ತುಳುನಾಡ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್
ಮಂಗಳೂರು: ನಟ ನಿರ್ದೇಶಕ ತುಳುನಾಡ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವವನ್ನು ಪಡೆದುಕೊಂಡರು.
ನಗರದ ಕೊಡಿಯಲ್ ಬೈಲ್ ನಲ್ಲಿರುವ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಡಿ.ವಿ. ಸದಾನಂದ ಗೌಡ ಮತ್ತು ಶಾಸಕ ವೇದವ್ಯಾಸ ಕಾಮತ್ ಉಪಸ್ಥಿತಿಯಲ್ಲಿ ಬಿಜೆಪಿಯ ಸದಸ್ಯತ್ವ ಪಡೆದುಕೊಂಡರು. ನಟ ಮತ್ತು ದೇವದಾಸ್ ಕಾಪಿಕಾಡ್ ಪುತ್ರ ಅರ್ಜುನ್ ಕಾಪಿಕಾಡ್ ಹಾಗೂ ಕುಟುಂಬಸ್ಥರು ಈ ಸಂದರ್ಭ ಉಪಸ್ಥಿತರಿದ್ದರು.
ಮೈಸೂರು: ದಸರಾ ಆನೆ ಅಭಿಮನ್ಯುವಿನ ಮಾವುತ ವಸಂತಗೆ ಮುಖ್ಯಮಂತ್ರಿ ಪದಕ – vishwanews24
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಪುತ್ತೂರು, ಮಹಾನಗರ ಪಾಲಿಕೆ ಸದಸ್ಯರಾದ ಲೀಲಾವತಿ, ಜಯಶ್ರೀ ಕುಡ್ವ, ಕಿಶೋರ್ ಕೊಟ್ಟಾರಿ ಉಪಸ್ಥಿತರಿದ್ದರು.ಅಲ್ಲದೇ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಯುವ ಮೋರ್ಛಾ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ, ಮಂಡಲ ಮಹಿಳಾ ಮೋರ್ಛಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ಈ ಸಂದರ್ಭದಲ್ಲಿ ಹಾಜರಿದ್ದರು.
ಹೃದಯಾಘಾತ : ಮದುವೆಗೆ ಒಂದು ದಿನ ಇರುವಾಗಲೇ ಯುವಕ ನಿಧನ – vishwanews24
