ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ; 40 ವಾರ್ಡ್ ಗಳಲ್ಲಿ ಬಿಜೆಪಿ ಭರ್ಜರಿ ಜಯಭೇರಿ -Vishwanews24
ಮಂಗಳೂರು,: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಪಾಲಾಗಿದೆ.
60 ವಾರ್ಡ್ ಗಳನ್ನು ಒಳಗೊಂಡಿರುವ ಮಂಗಳೂರು ಮಹಾನಗರ ಪಾಲಿಕೆಯಲ್ಲಿ40 ಸ್ಥಾನದಲ್ಲಿ ಜಯಭೇರಿ ಬಾರಿಸುವ ಮೂಲಕ ಬಿಜೆಪಿ ಕಾಂಗ್ರೇಸ್ ಪಕ್ಷದಿಂದ ಈ ಬಾರಿ ಅಧಿಕಾರವನ್ನು ಕಸಿದುಕೊಂಡಿದೆ.
ಕಾಂಗ್ರೇಸ್ ಪಕ್ಷದ ವಶದಲ್ಲಿದ್ದ ಮಂಗಳೂರು ಮಹಾನಗರ ಪಾಲಿಕೆ ಇದೀಗ ಬಿಜೆಪಿ ಪಕ್ಷದ ವಶವಾಗಿದ್ದು, ಪಕ್ಷದ ಅಭೂತಪೂರ್ವ ಗೆಲುವಿಗೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಹೆಚ್ಚಿನ ಕಡೆಗಳಲ್ಲಿ ಗೆಲುವಿನ ನಗೆ ಬೀರಿದೆ.
