ಮಂಗಳೂರು: ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳದ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮೋತಿ ಮಹಲ್ ಹೋಟೆಲ್​ ಸ್ವಿಮ್ಮಿಂಗ್ ಪೂಲ್​ನಲ್ಲಿ ಕೇರಳದ ಬ್ಯಾಂಕ್‌ ಅಧಿಕಾರಿ ಮೃತದೇಹ ಪತ್ತೆ

ಮಂಗಳೂರು: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್‌ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ‌ ಬ್ಯಾಂಕ್‌ ಅಧಿಕಾರಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿ ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ತಿಳಿದುಬಂದಿದೆ.

ಯೂನಿಯನ್ ಬ್ಯಾಂಕ್ ಅಧಿಕಾರಿಯಾದ ಗೋಪು ಆರ್ ನಾಯರ್ ಅವರು ನಿನ್ನೆ ಭಾನುವಾರ ಮಂಗಳೂರಿಗೆ ಬಂದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದು ಕೊಂಡಿದ್ದರು. ಬ್ಯಾಂಕ್ ಅಧಿಕಾರಿ ನಿನ್ನೆ ಸಂಜೆ 4 ಗಂಟೆ ವೇಳೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply