ಮಂಗಳೂರು : ಮೋದಿ ಮೂರನೆ ಬಾರಿ ಪ್ರಧಾನಿಯಾದರೆ ಸಂವಿಧಾನ ಕೂಡ ಉಳಿಯುವುದಿಲ್ಲ : ದಿನೇಶ್ ಗುಂಡೂರಾವ್ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಮೋದಿ ಮೂರನೆ ಬಾರಿ ಪ್ರಧಾನಿಯಾದರೆ ಸಂವಿಧಾನ ಕೂಡ ಉಳಿಯುವುದಿಲ್ಲ : ದಿನೇಶ್ ಗುಂಡೂರಾವ್

ಮಂಗಳೂರು : ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಂಸತ್ತಿನಿಂದ 142 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್ ಮುಂಭಾಗ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು .

ಪ್ರತಿಭಟನೆ ಉದ್ದೇಶಿಸಿ‌ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್. ಸಂಸತ್ತಿನಲ್ಲಿ ನಡೆದ ದಾಂಧಲೆಗೆ‌ ಭದ್ರತಾ ವೈಫಲ್ಯ ಕಾರಣವಾಗಿದ್ದು ಅದಕ್ಕೆ ಗೃಹ ಸಚಿವರು ಸ್ಪಷ್ಟೀಕರಣ ನೀಡಬೇಕಾಗಿದ್ದು, ಕೇಳಿದ್ದಕ್ಕೆ ಸಂಸದರನ್ನು ಅಮಾನತು ಮಾಡಲಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಯಾವುದನ್ನೂ ಪ್ರಶ್ನಿಸಲು ಅವಕಾಶವಿಲ್ಲ. ತನಿಖಾ ಸಂಸ್ಥೆಗಳನ್ನು ಬಳಸಿ ವಿಪಕ್ಷಗಳ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ. ವಿಪಕ್ಷಗಳ ಆಡಳಿತ ಇರುವಲ್ಲಿ ರಾಜ್ಯಪಾಲರನ್ನು ಬಳಸಿಕೊಂಡು ತೊಂದರೆ ನೀಡಲಾಗುತ್ತಿದೆ.‌

ಪುತ್ತೂರು ಸರಕಾರಿ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ರೋಗಿಗಳು ಅಪಾಯದಿಂದ ಪಾರು – vishwanews24

ದೇಶದ ಪ್ರಜಾಪ್ರಭುತ್ವ, ಜಾತ್ಯಾತೀತ, ಸಮಾಜವಾದದ ವ್ಯವಸ್ಥೆ, ಸಂಸ್ಕೃತಿಯನ್ನು ನಾಶ ಪಡಿಸಲಾಗುತ್ತಿದೆ. ಮೂಲಭೂತ ಹಕ್ಕುಗಳು ದಿನೇ ದಿನೇ ಕ್ಷೀಣಿಸುತ್ತಿದೆ. ಮಾಧ್ಯಮಗಳು ಕೂಡ ಪ್ರಶ್ನೆ ಮಾಡಲಾಗದಂತಹ ಸ್ಥಿತಿ ಇದೆ. ಪ್ರಧಾನಿ ಮೂರನೆ ಬಾರಿ ಪ್ರಧಾನಿಯಾದರೆ ಸಂವಿಧಾನ ಕೂಡ ಉಳಿಯುವುದಿಲ್ಲ. ಯಾವ ಸಂಸ್ಥೆಯು ಇರುವುದಿಲ್ಲ. ಮೋದಿಯವರನ್ನು ಪೂಜೆ ಮಾಡಿ ಕುಳಿತುಕೊಳ್ಳುವ ಸ್ಥಿತಿ ಬರಲಿದೆ. ಸರ್ವಾಧಿಕಾರ ಧೋರಣೆ ವಿರುದ್ದ ಹೋರಾಟ ಮುಂದುವರೆಸಲಾಗುವುದು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್ ಹಾಗೂ ಕಾಂಗ್ರೆಸ್ ಮುಖಂಡರುಗಳಾದ ಮಿಥುನ್ ರೈ, ಮಮತಾ ಗಟ್ಟಿ, ಶಶಿಧರ ಹೆಗ್ಡೆ ಮೊದಲಾದವರು ಪಾಲ್ಗೊಂಡಿದ್ದರು.

ಮಂಗಳೂರು : ಡೆಂಗ್ಯೂಗೆ ಯುವಕ ಬಲಿ..vishwanews24

Leave a Reply