ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ ಚಟುವಟಿಕೆಗೆ ಪ್ರೋತ್ಸಾಹಿಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ ಮಂಗಳಮುಖಿಯರು ನಿಂತು ವಾಹನ ಸವಾರರಿಗೆ ತೊಂದರೆ ಮಾಡುವ ಬಗ್ಗೆ ಹಲವಾರು ದೂರುಗಳು ಕೇಳಿ ಬಂದಿವೆ. ಈ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲದಂತೆ ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಇದೇ ರೀತಿ ಸಮಸ್ಯೆ ಮುಂದುವರಿದರೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಸಭೆಯಲ್ಲಿ ಉಪಸ್ಥಿತರಿದ್ದ ಟ್ರಾನ್ಸ್‍ಜೆಂಡರ್ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ, ಹೊರರಾಜ್ಯದ ಮಂಗಳಮುಖಿಯರು ಮಂಗಳೂರಿಗೆ ಬಂದು ಅಕ್ರಮ ಚಟುವಟಿಕೆಗಳಲ್ಲಿ ತೊಡಗುತ್ತಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದರು.

ಮಂಗಳಮುಖಿಯರಿಗೆ ವಸತಿ ನಿವೇಶನ ಒದಗಿಸಲು 15 ಮಂದಿ ನಿವೇಶನ ರಹಿತರ ಪಟ್ಟಿಯನ್ನು ಮಹಾನಗರಪಾಲಿಕೆಗೆ ನೀಡಲಾಗಿದೆ. ಇವರಿಗೆ ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ವ ಉದ್ಯೋಗ ಕೈಗೊಳ್ಳಲು ಪೆÇ್ರೀತ್ಸಾಹಧನ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.

ಇತ್ತೀಚೆಗೆ ನಡೆದ ಸರ್ವೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 96 ಟ್ರಾನ್ಸ್‍ಜೆಂಡರ್ ವ್ಯಕ್ತಿಗಳು ನೋಂದಾಯಿಸಿರುತ್ತಾರೆ. ಇವರಿಗೆ ಪುನರ್ವಸತಿ ಒದಗಿಸಲು ಸೇವಾಸಿಂಧು portal ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಮಂಗಳಮುಖಿ ಸಂಘಟನೆಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply