ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24
ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಹೆಸರಿಡಬೇಕು : ವಿಧಾನಸಭೆಯಲ್ಲಿ ಯುಟಿ ಖಾದರ್ -Vishwanews24
ಬೆಂಗಳೂರು: ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರಿಡಬೇಕು ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಮಾಜಿ ಸಚಿವ ಯುಟಿ ಖಾದರ್, ಮಂಗಳೂರು ವಿಮಾನ ನಿಲ್ದಾಣಕ್ಕೆ ಅಂದಿನ ಕಾಲದಲ್ಲಿ ಅಸಮಾನತೆಯ ವಿರುದ್ಧ ಹೋರಾಡಿದ ತುಳುನಾಡಿನ ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯ್ಯ ಅವರ ಹೆಸರಿಡಬೇಕು. ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಅವರ ಹೆಸರನ್ನಿಡಬೇಕು ಎಂದು ಆಗ್ರಹಿಸಿದರು. ಅಲ್ಲದೇ ಇದೇ ವೇಳೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಹೆಸರನ್ನಿಡಬೇಕು ಎಂದು ಯುಟಿ ಖಾದರ್ ಸದನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಬೆಳ್ತಂಗಡಿ : ವಯೋ ವೃದ್ಧ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವ ಮನೆ ಮಂದಿ -Vishwanews24
ಇತ್ತೀಚೆಗೆ ಜಿಲ್ಲೆಯ ಬಿಲ್ಲವ ಸಂಘಟನೆಗಳು ಮಂಗಳೂರಿನ ಕುದ್ರೋಳಿ ಸಮೀಪದ ಲೇಡಿಹಿಲ್ ಸರ್ಕಲ್ಗೆ ನಾರಾಯಣ ಗುರು ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಅಲ್ಲದೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಅವರ ಹೆಸರನ್ನಿಡುವಂತೆ ಆಗ್ರಹಿಸಿದ್ದವು. ಇದಕ್ಕಾಗಿ ಕೆಲವಾರದ ಹಿಂದೆ ಬೈಕ್ ಜಾಥಾವನ್ನೂ ನಡೆಸಲಾಗಿತ್ತು. ವಾರದ ಹಿಂದಷ್ಟೇ ವಿಮಾನ ನಿಲ್ದಣಕ್ಕೆ ಹೆಸರನ್ನಿಡುವ ಬಗ್ಗೆ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಈ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ್ದರು.
