ಮಂಗಳೂರು: ಲಂಚ ಸ್ವೀಕಾರ ವೇಳೆ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸಹಾಯಕ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಲಂಚ ಸ್ವೀಕಾರ ವೇಳೆ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್ ಸಹಾಯಕ

ಮಂಗಳೂರು: ಮಂಗಳೂರು ತಹಶೀಲ್ದಾರ್‌ ಅವರ ಸಹಾಯಕ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ನಗರದ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಅವರ ಸಹಾಯಕ ಶಿವಾನಂದ ನಾಟೇಕರ್ ಎಂಬಾತ ಎನ್‌ಒಸಿ ಮಾಡಿಸಿಕೊಡಲು ಸಾರ್ವಜನಿಕರೊಬ್ಬರಿಂದ ಲಂಚ ಕೇಳಿದ್ದ. ಅದರಂತೆ ಶುಕ್ರವಾರ ಮಧ್ಯಾಹ್ನ 4700 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾನೆ.

ಶೋಭಾಕ್ಕನವರ ಜೊತೆ ಸೆಲ್ಫಿ ತೆಗೆದು ಮಿಥುನ್ ರೈ ಅವರ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದೇವೆ : ವೀಣಾ ಶೆಟ್ಟಿ

ಲೋಕಾಯುಕ್ತ ಎಸ್ಪಿ ಲಕ್ಷ್ಮಿ ಗಣೇಶ್ ಹಾಗೂ ಡಿವೈಎಸ್‌ಪಿ ಚೆಲುವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆಯಲ್ಲಿ ನಡೆದಿದೆ. ಎಸಿಬಿ ರದ್ದುಗೊಂಡು ಲೋಕಾಯುಕ್ತಕ್ಕೆ ಮರಳಿ ಅಧಿಕಾರ ದೊರಕಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಪ್ರಕರಣ ಇದಾಗಿದೆ.

Leave a Reply