ಮಂಗಳೂರು: ವಕೀಲ ರಾಜೇಶ್ ಪ್ರಕರಣ ; ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವಕೀಲ ರಾಜೇಶ್ ಪ್ರಕರಣ – ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆ

ಮಂಗಳೂರು : ನಗರದ ವಕೀಲ ಕೆ.ಎಸ್.ಎನ್. ರಾಜೇಶ್ ವಿರುದ್ಧ ಈ ಹಿಂದೆ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯವು ದ.ಕ. ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶಿಸಿದೆ.

ರಾಜೇಶ್ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನೀಡಿರುವುದರ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಉಡುಪಿ: ದುಷ್ಕರ್ಮಿಗಳಿಂದ ಸಮುದ್ರ ಮಧ್ಯೆ  7 ಮಂದಿ ಮೀನುಗಾರರ ಅಪಹರಣ – ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್ ದರೋಡೆ – Vishwanews24

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 110 ಸಾಕ್ಷಿಗಳನ್ನು ವಿಚಾರಿಸಿ ಸಾಕ್ಷ್ಯಾಧಾರಗಳೊಂದಿಗೆ ಚಾರ್ಜ್ ಶೀಟ್ ನ್ನು ಎಸಿಪಿ ದಿನಕರ್ ಶೆಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿವಂತೆ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ನ್ಯಾ. ನಾಗಪ್ರಸನ್ನ ರಿಟ್ ಅರ್ಜಿಯನ್ನು ವಜಾಗೊಳಿಸಿ ಪ್ರಕರಣವು ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಬೇಕು ಎಂದು ಆದೇಶಿಸಿದ್ದರು. ಇದೊಂದು ಘೋರ ಪ್ರಕರಣವಾಗಿದ್ದು ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಬೇಕಾದ ಕಾರಣ ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾವಣೆಗೊಳಿಸಿ ಮಂಗಳೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾ. ತಾರಾ ಆದೇಶಿಸಿದ್ದಾರೆ.

ನಾನು ಆಕಾಂಕ್ಷಿಯಲ್ಲ , ಆರ್ಥಿಕವಾಗಿ, ದೈಹಿಕವಾಗಿ, ಮಾನಸಿಕವಾಗಿ ಕುಸಿದಿದ್ದೇನೆ : ಸಾರಾ ಮಹೇಶ್ – Vishwanews24

Leave a Reply