ಮಂಗಳೂರು : ವಿಧಾನ ಪರಿಷತ್ ಉಪಚುನಾವಣೆ ; ಮತ ಎಣಿಕೆ ಪ್ರಾರಂಭ – vishwanews24
ಮಂಗಳೂರು : ವಿಧಾನ ಪರಿಷತ್ ಉಪಚುನಾವಣೆ – ಮತ ಎಣಿಕೆ ಪ್ರಾರಂಭ
ಮಂಗಳೂರು:ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದಂತಹ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಇಂದು ಪ್ರಾರಂಭವಾಗಿದೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿದೆ.
ಪ್ರಾರಂಭದ ಹಂತದಲ್ಲಿ ಮತಪೆಟ್ಟಿಗೆಗಳನ್ನು ತೆರೆದು ಮೊದಲ ಹಂತದ ಒಟ್ಟು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಲಾಗುವುದು. ನಂತರ ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಮಾಡಿ, ಘೋಷನೆ ಮಾಡಲಾಗುವುದು ಎಂದು ಹೇಳಲಾಗಿದೆ.
ಬೆಂಗಳೂರು: ಕಟ್ಟಡ ಕುಸಿತ ಪ್ರಕರಣ – ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ – vishwanews24
ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ .
