ಮಂಗಳೂರು ವಿಮಾನ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ ಪತ್ತೆ…! Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದ್ದು ಆತಂಕ ಮೂಡಿಸಿದೆ. ವಿಮಾನ ನಿಲ್ದಾಣದ ಹೊರಭಾಗದ ಪ್ರಯಾಣಿಕರು ವಿಶ್ರಾಂತಿ ಪಡೆಯುವ ಸ್ಥಳದಲ್ಲಿ ಈ ಬ್ಯಾಗ್ ಪತ್ತೆಯಾಗಿದೆ.

ಬ್ಯಾಗ್ ಇರುವುದನ್ನು ಗಮನಿಸಿದ ಪ್ರಯಾಣಿಕರು ಕೂಡಲೇ ಭದ್ರತಾ ಸಿಬ್ಬಂದಿ ಗಮನಕ್ಕೆ ತಂದಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಸಿಬಂಧಿ ಬ್ಯಾಗನ್ನು ಅಲ್ಲಿಂದ ಏರ್‌ಪೋರ್ಟ್‌ ಹೊರಭಾಗದ ಆವರಣಕ್ಕೆ ಕೊಂಡೊಯ್ದಿದ್ದಾರೆ.

ಸ್ಥಳಕ್ಕೆ ಬಜ್ಪೆ ಠಾಣೆಯ ಪೊಲೀಸರು ಆಗಮಿಸಿದ್ದು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬ್ಯಾಗ್ ಯಾರಿಗೆ ಸೇರಿದ್ದು ಯಾಕಾಗಿ ಬಿಟ್ಟು ಹೋದರು ಎಂಬುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿತ್ಯ ಸಾವಿರಾರು ಜನರು ವಿದೇಶಕ್ಕೆ ಪ್ರಯಾಣ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸುರಕ್ಷತೆಯನ್ನು ನಿಲ್ದಾಣದಲ್ಲಿ ಒದಗಿಸಲಾಗಿದೆ. ಪ್ರತಿ ಹೆಜ್ಜೆಗೂ ತಪಾಸನೆಯನ್ನು ಮಾಡಲಾಗುತ್ತದೆ. ಹೀಗಿದ್ದರೂ ವಿದೇಶದಿಂದ ಚಿನ್ನ ಕಳ್ಳಸಾಗಣಿಕೆ ಈ ವಿಮಾನ ನಿಲ್ದಾಣದ ಮೂಲಕವೇ ನಡೆಯುತ್ತದೆ.

ಸದ್ಯ ಬ್ಯಾಗನ್ನು ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಆದರೆ ಬ್ಯಾಗ್ ವಾರಸುದಾರರು ಯಾರು ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ನಿಲ್ದಾಣದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು ಪೊಲೀಸರು ಅದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292