ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಪ್ರಕರಣ: ಮತ್ತೆ ಇಬ್ಬರು ವೈದ್ಯರ ಬಂಧನ – ಬಂಧಿತರ ಸಂಖ್ಯೆ 15ಕ್ಕೆ ಏರಿಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಪ್ರಕರಣ: ಮತ್ತೆ ಇಬ್ಬರು ವೈದ್ಯರ ಬಂಧನ – ಬಂಧಿತರ ಸಂಖ್ಯೆ 15ಕ್ಕೆ ಏರಿಕೆ

ಮಂಗಳೂರು: ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಳಗೊಂಡ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಆಂಧ್ರ ಪ್ರದೇಶದ ಅನಂತಪುರದ ನಿವಾಸಿ ಹಾಗೂ ಹಾಲಿ ಅತ್ತಾವರದ ಅಪಾರ್ಟ್‌ ಮೆಂಟ್‌ನಲ್ಲಿ ವಾಸವಿರುವ ಡಾ| ರಾಘವ ದತ್ತಾ (28), ಇನ್ನೋರ್ವ ಆರೋಪಿ ಬೆಂಗಳೂರು ಹಲ್ಸೂರು ಜೋಡುಪಾಲ್ಯದ ನಿವಾಸಿ ಹಾಗೂ ಹಾಲಿ ಮಂಗಳೂರಿನ ಫಳ್ನೀರ್‌ ನಲ್ಲಿ ವಾಸವಿರುವ ಡಾ. ಬಾಲಾಜಿ (29) ಎಂದು ಗುರುತಿಸಲಾಗಿದೆ.

ಪುತ್ತೂರು : ಯಾರಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲವೋ ಅಂತವರು ಹಿಂದೂ ಆಗಿರಲು ಸಾಧ್ಯವಿಲ್ಲ : ಅನಂತಕುಮಾರ್ ಹೆಗ್ಡೆ

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿ 13 ಮಂದಿ ಆರೋಪಿಗಳನ್ನು ಈ ಹಿಂದೆಯೇ ಬಂಧಿಸಲಾಗಿದ್ದು, ಮತ್ತೆ ಇಬ್ಬರ ಬಂಧನದೊಂದಿಗೆ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 15ಕ್ಕೇರಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸುದ್ದಿಗಾರರಿಗೆ ಶುಕ್ರವಾರ ಮಾಹಿತಿ ನೀಡಿದರು.

ಪ್ರಕರಣದ ತನಿಖೆ ಮುಂದವರಿಸಲಾಗಿದ್ದು, ಮತ್ತಷ್ಟು ಜನರ ಬಂಧನದ ಸಾಧ್ಯತೆ ಇದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಮಂಗಳೂರು: ಟಿಕೆಟ್‌ ಬುಕ್ಕಿಂಗ್ ಹೆಸರಲ್ಲಿ ವಂಚನೆ ; ಬ್ಯಾಂಕ್ ಖಾತೆಗೆ ಕನ್ನ – Vishwanews24

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply