ಮಂಗಳೂರು: ಸಚಿವ ಸಂಪುಟ ಸಭೆ ಘೋಷಣೆಗಳಿಗೆ ಮಾತ್ರ ಸೀಮತವಾಗಿರದೆ ಜಿಲ್ಲೆಯ ಅಭಿವೃದ್ಧಿಗೆ ಪ್ರಯೋಜನವಾಗಬೇಕು : ಸತೀಶ್ ಕುಂಪಲ – vishwanews24
ಮಂಗಳೂರು: ಸಚಿವ ಸಂಪುಟ ಸಭೆ ಘೋಷಣೆಗಳಿಗೆ ಮಾತ್ರ ಸೀಮತವಾಗಿರದೆ ಜಿಲ್ಲೆಯ ಅಭಿವೃದ್ಧಿಗೆ ಪ್ರಯೋಜನವಾಗಬೇಕು : ಸತೀಶ್ ಕುಂಪಲ
ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆ ಘೋಷಣೆಗಳಿಗೆ ಮಾತ್ರ ಸೀಮತವಾಗಿರದೆ ಕರಾವಳಿಯ, ವಿಶೇಷವಾಗಿ ದ. ಕ. ಜಿಲ್ಲೆಯ ಅಭಿವೃದ್ಧಿಗೆ ಪ್ರಯೋಜನವಾಗಬೇಕು ಎಂದು ದ. ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘೋಷಣೆಗಳು ಅನುಷ್ಠಾನಕ್ಕೆ ಬರಬೇಕು. ಅದಕ್ಕೆ ಪೂರಕ ಅನುದಾನ ಸಿಗಬೇಕು. ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧವಾಗಿದ್ದು, ಈ ದೃಷ್ಟಿಯಿಂದ ಸಚಿವ ಸಂಪುಟ ಸಭೆಯನ್ನು ಸ್ವಾಗತಿಸಿ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು.
ಹಾಗಾಗಿ ಬಿಜೆಪಿ ನೇತೃತ್ವದಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬೇಡಿಕೆಗಳ ಪಟ್ಟಿ ಸಲ್ಲಿಸಲಾಗಿದೆ ಎಂದರು.
ಬಿಜೆಪಿ ಸರಕಾರವಿದ್ದಾಗ ಸಚಿವರಾಗಿದ್ದ ಸುನಿಲ್ ಕುಮಾರ್‌ಅವರು ತುಳು ರಾಜ್ಯದ 2ನೇ ಅಧಿಕೃತ ಭಾಷೆಯಾಗಬೇಕೆಂಬ ಉದ್ದೇಶದಿಂದ ಮೋಹನ ಆಳ್ವ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದರು. ಆ ಸಮಿತಿ ವರದಿ ಸಲ್ಲಿಸಿದೆ. ಹಾಗಾಗಿ ಸಚಿವ ಸಂಪುಟದಲ್ಲಿ ತುಳು 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯರಾದ ಕಿಶೋರ್‌ಕುಮಾರ್‌ಪುತ್ತೂರು, ಧನಂಜಯ ಸರ್ಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆಳ್ವ, ಕೋಶಾಧಿಕಾರಿ ಸಂಜಯ್ ಪ್ರಭು, ವಕ್ತಾರ ಅರುಣ್ ಶೇಟ್, ಮಾಧ್ಯಮ ಸಂಚಾಲಕ ವಸಂತ ಪೂಜಾರಿ ಉಪಸ್ಥಿತರಿದ್ದರು.
