ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ದೂರು ದಾಖಲು – Vishwanews24
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ : ದೂರು ದಾಖಲು
ಮಂಗಳೂರು: ರಿಯಾಲಿಟಿ ಶೋ ’ಬಿಗ್ ಬಾಸ್ ’ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕುರುವ ಬಗ್ಗೆ ಅವರ ಕುಟುಂಬಸ್ಥರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಬಿಗ್ ಬಾಸ್ ಶೋನಲ್ಲಿ ರೂಪೇಶ್ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಕೆಲವರು ಬೆದರಿಕೆ ಹಾಕಿದ್ದಾರೆ, ರೂಪೇಶ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಕುಟುಂಬಸ್ಥರು ದೂರಿನಲ್ಲಿ ಆರೋಪಿಸಿದ್ದಾರೆ.
ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ನೆರೆಹೊರೆ ಯವರೊಂದಿಗೆ ಎಚ್ಚರ.. ನೋಡಿ ಇಂದಿನ ದಿನ ಭವಿಷ್ಯ – Vishwanews24
