ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO
ಮಂಗಳೂರು: ರಿಫೈನರಿ & ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಶ್ರೀ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.
ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ. ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24
ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಶ್ರೀ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಶ್ರೀ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.
ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.
ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24
EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವು ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.
