ಮಂಡ್ಯ :  ಬಿರುಗಾಳಿ ಸಹಿತ ಭಾರಿ ಮಳೆ ; ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು – Vishwanews24

Featured, ರಾಜ್ಯ ನ್ಯೂಸ್

ಮಂಡ್ಯ :  ಬಿರುಗಾಳಿ ಸಹಿತ ಭಾರಿ ಮಳೆ – ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವು

ಮಂಡ್ಯ: ಸೋಮವಾರ ರಾತ್ರಿ ಮಂಡ್ಯದಲ್ಲಿ  ಬಿರುಗಾಳಿ ಸಹಿತ ಸುರಿದ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಸೋಮವಾರ ರಾತ್ರಿ ನಗರದ ಆಸ್ಪತ್ರೆ ರಸ್ತೆಯಲ್ಲಿ ನಡೆದ ದುರಂತದಲ್ಲಿ ತಾಲೂಕಿನ ಜಿ.ಬೊಮ್ಮನಹಳ್ಳಿ ಗ್ರಾಮದ ರಾಮಯ್ಯನ ಪುತ್ರ ಕಾರ್ತಿಕ್ (28) ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್, ಇವರ ಜೊತೆ ಕಾರಿನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಬಂಟ್ವಾಳ  : ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ – Vishwanews24

ಮಂಗಳವಾರ ಕಾರ್ತಿಕ್ ಅವರ ಹುಟ್ಟುಹಬ್ಬವಿದ್ದ ಹಿನ್ನೆಲೆಯಲ್ಲಿ ಸ್ನೇಹಿತರಾದ ಸುನೀಲ್ ಮತ್ತು ಚೇರನಹಳ್ಳಿ ಮಂಜು ಅವರೊಂದಿಗೆ ಮಂಡ್ಯ ನಗರಕ್ಕೆ ಓಮ್ನಿ ಕಾರಿನಲ್ಲಿ ಬಟ್ಟೆ ಖರೀದಿಸಲು ಬಂದಿದ್ದರು. ಸೋಮವಾರ ರಾತ್ರಿ 8ರ ಹೊತ್ತಿಗೆ ಗಾಳಿಸಮೇತ ಮಳೆ ಆರಂಭಗೊಂಡಿದ್ದು, ಆಸ್ಪತ್ರೆ ರಸ್ತೆಯ ತಿರುವಿನಲ್ಲಿ ಮರ ಕಾರಿನ ಮೇಲೆ ಬಿದ್ದಿದೆ. ತಕ್ಷಣ ಸಾರ್ವಜನಿಕರು ರಕ್ಷಣೆಗೆ ಮುಂದಾಗಿದ್ದರು. ಆದರೆ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಸಿಲುಕಿದ್ದ ಕಾರ್ತಿಕ್ ಸಾವನ್ನಪ್ಪಿದ್ದು, ಇನ್ನಿಬ್ಬರು ಪಾರಾಗಿದ್ದಾರೆ.

ಪ್ರಜ್ವಲ್‌ ಅವರನ್ನು ವಾಪಸ್‌ ಕರೆತಂದು ಕಠಿಣ ಶಿಕ್ಷೆ ಆಗಬೇಕು : ಮೋದಿ ಆಗ್ರಹ – Vishwanews24

Leave a Reply