ಮಂಡ್ಯ ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅವರಿಗೆ ಬಹಿರಂಗವಾಗಿ ಬೆಂಬಲ ಘೋಷಿಸಿದ ಬಿಜೆಪಿ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರುಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದರು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅವರಿಗೆ ಬಿಜೆಪಿ ಅಧಿಕೃತವಾಗಿ ಬೆಂಬಲ ಘೋಷಿಸಿರುವ ಹಿನ್ನೆಲೆಯಲ್ಲಿ, ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿಂದು ಅವರನ್ನು ಭೇಟಿಯಾಗಿ ಸುಮಲತಾ ಅಂಬರೀಶ್ ಧನ್ಯವಾದ ಸಲ್ಲಿಸಿದರು.

ನಿನ್ನೆಯಷ್ಟೇ ಅಂಬರೀಶ್ ಅವರ ನಾಲ್ಕನೇ ತಿಂಗಳ ಪುಣ್ಯ ತಿಥಿ ಅಂಗವಾಗಿ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ್ದ ಸುಮಲತಾ, ಬಿಜೆಪಿ ಬೆಂಬಲ ನೀಡುವ ಬಗ್ಗೆ ಅಧಿಕೃತ ಮಾಹಿತಿ ಇರಲಿಲ್ಲ. ಆದರೀಗ ಬಿಜೆಪಿ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿರುವುದು ಮತ್ತಷ್ಟು ಬಲ ಬಂದಂತಾಗಿದೆ. ಜೊತೆಗೆ ಕಾಂಗ್ರೆಸ್ ನಾಯಕರ ಬೆಂಬಲವೂ ಇದೆ. ಸದ್ಯದಲ್ಲೇ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಧನ್ಯವಾದ ತಿಳಿಸುತ್ತೇನೆ ಎಂದಿದ್ದರು.