ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ : ಒಬ್ಬನ ಬಂಧನ , ಮತ್ತೊಬ್ಬ ನಾಪತ್ತೆ – vishwanews24 https://wp.me/p9KQap-oUM

Featured, ರಾಜ್ಯ ನ್ಯೂಸ್

ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ , ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರ ಯತ್ನ ನಡೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದಲ್ಲಿ ಜುಲೈ 18 ರಂದು ಘಟನೆ ನಡೆದಿದೆ.

ಯಾತ್ರಾತ್ರಿಗಳಿಬ್ಬರು ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದರು. ಈ ವೇಳೆ ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷಾ (44), ಸಾಯಿ ಬಾಬಾ (24) ಮತಾಂತರಕ್ಕೆ ಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.

ಚಿಕ್ಕಮಗಳೂರು: ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ -vishwanews24

ಕೇಸರಿ ಧ್ವಜ ಹಿಡಿದುಕೊಂಡು ಮಂತ್ರಾಲಯಕ್ಕೆ ಪಾದಯಾತ್ರೆ ಮಾಡುತ್ತಿದ್ದರು. ಈ ವೇಳೆ ಮುಸ್ಲಿಂ ಧರ್ಮವನ್ನು ಬೋಧನೆ ಮಾಡಲಾಗಿದೆ ಎಂದು ಗಾದಿಲಿಂಗಪ್ಪ ಎನ್ನುವವರು ದೂರು ನೀಡಿದ್ದಾರೆ.
ಅನ್ಯ ಧರ್ಮದವರು ತಮ್ಮ ಗುರುಗಳ ಬಗ್ಗೆ ಬೋಧನೆ ಮಾಡುತ್ತಿರುವ ದೃಶ್ಯವನ್ನು ಗಾದಿಲಿಂಗಪ್ಪ ಸೆರೆಹಿಡಿದಿದ್ದಾರೆ.

ಅನ್ಯ ಧರ್ಮದವರು ಮಾತನಾಡಿದ ಬಳಿಕ ಯಾತ್ರಾತ್ರಿಗಳಿಗೆ ಅವರ ಮಾತು ನಂಬಬೇಡಿ ಅವರೆಲ್ಲ ಮತಾಂತರ ಮಾಡುತ್ತಾರೆ ಎಂದು ಗಾದಿಲಿಂಗಪ್ಪ ಬುದ್ಧಿ‌ಹೇಳಿದರು.

ಮಫ್ಲರ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿ- vishwanews24

ಮತಾಂತರ ಮಾಡಲು ಪ್ರಯತ್ನ ಮಾಡಿದ ಹಿನ್ನೆಲೆಯಲ್ಲಿ ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ತೆಕ್ಕಲಕೋಟೆ ಪಟ್ಟಣದ ಹುಸೇನ್ ಭಾಷ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವೇಳೆ ಮತ್ತೋರ್ವ ಆರೋಪಿ ಸಾಯಿಬಾಬಾ ಎಂಬಾತ ನಾಪತ್ತೆಯಾಗಿದ್ದಾರೆ.

Leave a Reply