ಮಕ್ಕಳಿಗೆ ಲಸಿಕೆ ಭಾಗ್ಯ : 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ – Vishwanews24
ಮಕ್ಕಳಿಗೆ ಲಸಿಕೆ ಭಾಗ್ಯ : 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ – Vishwanews24
ನವದೆಹಲಿ: ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. 2ರಿಂದ 18 ವರ್ಷದ ಮಕ್ಕಳಿಗೆ ಭಾರತ ಬಯೋಟೆಕ್ ಕೋವ್ಯಾಕ್ಸಿನ್ ನೀಡಲು ತಜ್ಞರ ಸಮಿತಿ ಅನುಮತಿ ನೀಡಿದೆ.
ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು, ತುರ್ತು ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಇಂದು ನಡೆದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ತುರ್ತು ಬಳಕೆಗೆ ಒಪ್ಪಿಗೆ ಸಿಕ್ಕಿದೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇದೀಗ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ಸಿಕ್ಕಿರುವುದು ಸಮಾಧಾನಕರ ಸಂಗತಿಯಾಗಿದೆ.
ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು. ಐಸಿಎಂಆರ್(Indian Council of Medical Research ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್ -19 ಲಸಿಕೆ ಆಗಿದೆ. 2ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ತಜ್ಞರ ತಂಡ ಒಪ್ಪಿಗೆ ಸೂಚಿಸಿದೆ.
ಉಪ್ಪಿನಂಗಡಿ ಭೀಕರ ಅಪಘಾತ : KSRTC ಬಸ್ ಡಿಕ್ಕಿ ; ತಾಯಿ – ಮಗು ಸ್ಥಳದಲ್ಲೇ ದಾರುಣ ಸಾವು – Vishwanews24
ಮಕ್ಕಳಿಗೆ ಕೋವ್ಯಾಕ್ಸಿನ್ ನೀಡುವ ಬಗ್ಗೆ ಒಂದು ವಾರದ ಹಿಂದೆ ಕ್ಲಿನಿಕಲ್ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಲಾಗಿತ್ತು. ಈ ವರದಿ 1, 2 ಮತ್ತು 3ನೇ ಹಂತದ ಕ್ಲಿನಿಕಲ್ ಪರೀಕ್ಷೆಯ ವಿವರ, ಫಲಿತಾಂಶವನ್ನು ಒಳಗೊಂಡಿತ್ತು. ಸೆ. 21ರಂದು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ 3ನೇ ಹಂತದ ಪ್ರಯೋಗ ಪೂರ್ಣಗೊಂಡಿತ್ತು. ಒಟ್ಟು 1,000 ಮಕ್ಕಳ ಮೇಲೆ ಪ್ರಯೋಗ ನಡೆಸಲಾಗಿತ್ತು.
ಭಾರತ ಮೂಲದ ಜೈಡಸ್ ಕ್ಯಾಡಿಲಾ (Zydus Cadila) ಕಂಪನಿ ಅಭಿವೃದ್ಧಿಪಡಿಸಿರುವ ಜೈಕೊವ್-ಡಿ ಲಸಿಕೆಯ (ZyCov-D Vaccine) ತುರ್ತು ಬಳಕೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಮೂರು ಡೋಸ್ಗಳನ್ನು ಹೊಂದಿರುವ ಈ ಲಸಿಕೆಯನ್ನು ಅಕ್ಟೋಬರ್ ಬಳಿಕ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವುದು. ಮುಖ್ಯವಾಗಿ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎನ್ನಲಾಗಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ
ಐಸಿಎಂಆರ್ ನಡೆಸಿದ ಸೆರೊಸರ್ವೇ, ದೇಶದಲ್ಲಿ ಸುಮಾರು ಶೇ.60 ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮಕ್ಕಳಲ್ಲಿ ಸೋಂಕಿನಿಂದ ಮರಣ ಪ್ರಮಾಣ ದಶಲಕ್ಷದಲ್ಲಿ ಎರಡು ಆಗಿದೆ. ಇದು ಅತಿ ಕನಿಷ್ಠವಾಗಿದೆ. ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆಯು ವಯಸ್ಕರಂತೆಯೇ ಮಕ್ಕಳಲ್ಲಿ ಕೂಡ ಪರಿಣಾಮ ತೋರುತ್ತದೆ. ಲಸಿಕೆಯ ಸುರಕ್ಷತೆ ಹಾಗೂ ರೋಗನಿರೋಧಕ ಶಕ್ತಿ ಮಕ್ಕಳಲ್ಲಿಯೂ ವಯಸ್ಕರಂತೆಯೇ ಇರಲಿದೆ ಎಂದು ಎಂದು ಏಮ್ಸ್ ಸೆಂಟರ್ ಫಾರ್ ಕಮ್ಯುನಿಟಿ ಮೆಡಿಸಿನ್ ಪ್ರೊಫೆಸರ್ ಡಾ. ಸಂಜಯ್ ಕೆ ರೈ ತಿಳಿಸಿದ್ದಾರೆ.
ಉಡುಪಿ: ರಸ್ತೆ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು – Vishwanews24
