ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ – vishwanews24
ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಳ್ಳಂಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ಮಾರುಕಟ್ಟೆ ಪರಿಶೀಲನೆ ವೇಳೆ ಸುಮಾರು 7ರಿಂದ 10 ವರ್ಷ ವಯಸ್ಸಿನ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಮುಖ್ಯಮಂತ್ರಿ ಗಮನಿಸಿದರು. ಇದನ್ನು ಕಂಡು ಬೇಸರ ವ್ಯಕ್ತಪಡಿಸಿದ ಅವರು, ಬಾಲ ಕಾರ್ಮಿಕ ಪದ್ಧತಿ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರು ಹಾಗೂ ಮಕ್ಕಳಿಂದ ಕೆಲಸ ಮಾಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಂಜೆಯೊಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ರೈತರ ವಿಮೆ ಹಣ ಬ್ಯಾಂಕಿಗೆ ಪಾವತಿ ಮಾಡದ ಸೊಸೈಟಿ ಕಾರ್ಯದರ್ಶಿ ವಜಾ: ಸಿಎಂ ಡಿ.ಕೆ.ಶಿ ಸೂಚನೆ – vishwanews24
ಬಾಲ ಕಾರ್ಮಿಕರ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಸರ್ಕಲ್ ಇನ್ಸ್ಪೆಕ್ಟರ್, ಡಿವೈಎಸ್ಪಿ/ಎಸಿಪಿ ಹಾಗೂ ಡಿಸಿಪಿ ಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಂಜೆಯೊಳಗೆ ಬಾಲ ಕಾರ್ಮಿಕರ ಸಮಸ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
