ಮಡಿಕೇರಿಯಲ್ಲಿ ರಂಪಾಟ ನಡೆಸಿ ಸಾರ್ಜಜನಿಕರ ಆಕ್ರೋಶಕ್ಕೆ ಗುರಿಯಾದ ಹುಚ್ಚ ವೆಂಕಟ್ -Vishwanews24
ಮಡಿಕೇರಿ: ಮಡಿಕೇರಿಯಲ್ಲಿ ಹುಚ್ಚಾಟವಾಡಿ ಸಾರ್ಜಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ಹುಚ್ಚಾಟ-ರಂಪಾಟ ನಡೆಸಿದ್ದಾರೆ. ಮಧ್ಯ ದಾರಿಯಲ್ಲಿ ಮನಸೋ ಇಚ್ಛೆ ವರ್ತನೆ ಮಾಡಿದ್ದು ಕಾರೊಂದನ್ನು ಪುಡಿ ಪುಡಿ ಮಾಡಿದ್ದಾರೆ.ಮಡಿಕೇರಿ ನಗರದ ಕೆಎಸ್ ಆರ್ ಟಿಸಿ ಡಿಪೋ ಬಳಿ ಘಟನೆ ನಡೆದಿದ್ದು ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನ ಗ್ಲಾಸ್ ಒಡೆದು ಪುಂಡಾಟ ಮೆರೆದ ವೆಂಕಟ್ ಗೆ ಸ್ಥಳೀಯರು ಗೂಸಾ ನೀಡಿದ್ದಾರೆ.
ಹುಚ್ಚ ವೆಂಕಟ್ ಮಡಿಕೇರಿ ನಗರದ ಡಿಪೋ ಬಳಿ ಕಾಣಿಸಿಕೊಂಡು, ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದರು. ಈ ವೇಳೆ ನಾಪೋಕ್ಲುವಿನ ದಿಲೀಪ್ ಎಂಬವರು ತಮ್ಮ ಕಾರನ್ನು ಡಿಪೋ ಬಳಿ ನಿಲ್ಲಿಸಿ ಸಮೀಪದ ಎಟಿಎಂಗೆ ಹೋಗಿದ್ದರು. ಎಟಿಎಂನಿಂದ ಹಿಂತಿರುಗುತ್ತಿದ್ದ ದಿಲೀಪ್ ಸಾಮಾನ್ಯವಾಗಿಯೇ ಹುಚ್ಚ ವೆಂಕಟ್ ಅವರನ್ನು ನೋಡಿದ್ದಾರೆ. ಇಷ್ಟಕ್ಕೆ ಕೆರಳಿದ ಹುಚ್ಚ ವೆಂಕಟ್ ‘ನನ್ನ ಯಾಕೆ ಗುರಾಯಿಸುತ್ತಿದ್ದೀಯಾ’ ಎಂದು ತಕರಾರು ಎತ್ತಿದ್ದಾರೆ.
ಹುಚ್ಚ ವೆಂಕಟ್ ಹುಚ್ಚಾಟವನ್ನು ಗಮನಿಸುತ್ತಿದ್ದ ಸ್ಥಳೀಯರು ಕೋಪಗೊಂಡು, ಬುದ್ಧಿ ಹೇಳಲು ಮುಂದಾದರು. ಆದರೆ ಹುಚ್ಚ ವೆಂಕಟ್ ಸುಮ್ಮನಾಗದಿದ್ದಾಗ ಸುತ್ತುವರಿದ ಸಾರ್ವಜನಿಕರು ದಿಲೀಪ್ ಕೈಯಿಂದ ಹಲ್ಲೆ ನಡೆಸಿದ್ದಲ್ಲದೆ, ತಾವೂ ಕೂಡ ಥಳಿಸಿದ್ದಾರೆ.
ಈ ಬಗ್ಗೆ ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ಪೊಲೀಸರು ಹುಚ್ಚ ವೆಂಕಟ್ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
