ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು – vishwanews24
ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಢಿಕ್ಕಿ : ಪೋಷಕರ ವಿರುದ್ಧ ಪ್ರಕರಣ ದಾಖಲು
ಮಣಿಪಾಲ: ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದು, ಈ ಸಂಬಂಧ ಬಾಲಕ ಹಾಗೂ ಆತನ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೇತಾಜಿ ನಗರ ಕಡೆಯಿಂದ ಪ್ರಗತಿ ನಗರದ ಕಡೆಗೆ ಬಡಗುಬೆಟ್ಟು ಗ್ರಾಮದ ಅಪ್ರಾಪ್ತನೊಬ್ಬ ಚಲಾಯಿಸಿಕೊಂಡು ಬರುತ್ತಿದ್ದ ಕಾರು, ಮನೆಯ ಹೊರಗಡೆ ರಸ್ತೆ ಬದಿ ನಿಲ್ಲಿಸಿದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರ ಪರಿಣಾಮ ಸ್ಕೂಟರ್ ಮನೆಯ ಕಂಪೌಂಡಿಗೆ ತಾಗಿ ಬಿದ್ದಿತ್ತು. ಇದರಿಂದ ಸ್ಕೂಟರ್ ರಸ್ತೆಗೆ ಬಿದ್ದು ಜಖಂಗೊಂಡಿದೆ. ಕಾರು ಚಾಲಕ ಹಾಗೂ ಅಪ್ರಾಪ್ತ ಬಾಲಕನಿಗೆ ಕಾರನ್ನು ಚಲಾಯಿಸಲು ನೀಡಿದ ಕಾರಿನ ಮಾಲಕ ಸಲೀಂ ಎಂಬವರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು – vishwanews24
