ಮಣಿಪಾಲ : ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ : ಇಬ್ಬರ ಬಂಧನ -Vishwanews24

Featured, ಉಡುಪಿ

ಮಣಿಪಾಲ : ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ : ಇಬ್ಬರ ಬಂಧನ -Vishwanews24

ಉಡುಪಿ: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ನಿಲ್ಲಿಸಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಇಬ್ಬರು ಆರೋಪಿಗಳನ್ನು ಮಾ.12ರ ಶುಕ್ರವಾರ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉಡುಪಿಯ ಕೆಳ ಪರ್ಕಳದ ವಿವೇಕಾನಂದ ಕಾಮತ್ (27 ), ಮಾರುತಿ ನಗರದ ಪರ್ಕಳದ ಧನಂಜಯ( 26) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಈಶ್ವರ ನಗರದ ಬಳಿ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಣಿಪಾಲ ಕಾಲೇಜಿನ ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಯನ್ನು ಮಾ. ರ 12 ರಾತ್ರಿ 1:30 ಗಂಟೆಗೆ ಅಡ್ಡಗಟ್ಟಿ ನಿಲ್ಲಿಸಿ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು.

ಉಡುಪಿ : ವಿದ್ಯೋದಯ ಪ.ಪೂ.ಕಾಲೇಜು : ಜೆ.ಇ.ಇ. ಮೈನ್ಸ್ ಸಾಧನೆ -Vishwanews24

ವಿದ್ಯಾರ್ಥಿನಿಯು ಕೂಡಲೇ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಣಿಪಾಲ ಪೊಲಿಸರಿಗೆ ಮಾಹಿತಿ ನೀಡಿದ್ದು ಪೊಲೀಸರು ಕೂಡಲೇ ಕಾರ್ಯಪ್ರವೃತ್ತರಾಗಿ
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮಂಗಳೂರು : ಮಾ.27ರಂದು ಉಳ್ಳಾಲ ತಾಲೂಕು ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನ -Vishwanews24

ಈ ಬಗ್ಗೆ ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಎಸ್ ವಿಷ್ಣುವರ್ಧನ ,ಐ.ಪಿ.ಎಸ್ ರವರು ಮಣಿಪಾಲದಲ್ಲಿನ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಹಾಗೂ ಸಾರ್ವಜನಿಕರಿಗೆ ರಾತ್ರಿ ವೇಳೆಯಲ್ಲಿ ತಿರುಗಾಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರುವಂತೆ ಮನವಿ ಮಾಡಿರುತ್ತಾರೆ. ಹಾಗೂ ಇಂಥಹ ಕೃತ್ಯವನ್ನು ಎಸಗುವವರು ಯಾರೇ ಆಗಿದ್ದರೂ ಅವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುತ್ತಾರೆ.

ಮಂಗಳೂರು : ಕೇರಳ ಹೆಚ್ಚುತ್ತಿರುವ ಕೊರೊನಾ ಪ್ರಕರಣ : ಗ್ರಾಮಗಳಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ರಚನೆ ;ಗಡಿಯಲ್ಲಿ ಕಟ್ಟೆಚ್ಚರ -Vishwanews24