ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ – VIshwanews24

Featured, ರಾಷ್ಟ್ರ ನ್ಯೂಸ್

ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ: ಹೆಚ್.ಡಿ. ಕುಮಾರಸ್ವಾಮಿ – VIshwanews24

ನವದೆಹಲಿ: ರಾಜ್ಯ ವಿಧಾನಸಭೆಯಲ್ಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ಹೇಳಿದ್ದಾರೆ.

ಈ ಸಂಬಂಧ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿಕ್ಕೆ. ಅಗತ್ಯವಿಲ್ಲದ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಅಲ್ಲ ಎಂದು ಹೇಳಿದ್ದಾರೆ.

ಈ ಕಾಯ್ದೆಯನ್ನು ನಮ್ಮ ಪಕ್ಷ ಸ್ಪಷ್ಟವಾಗಿ ವಿರೋಧಿಸುತ್ತದೆ ಹಾಗೂ ಕಲಾಪದಲ್ಲಿ ಭಾಗಿಯಾಗುವ ನಮ್ಮ ಎಲ್ಲ ಶಾಸಕರು ಕೂಡ ಇದನ್ನು ಖಂಡಿತವಾಗಿಯೂ ವಿರೋಧ ಮಾಡುತ್ತಾರೆ ಎಂದು ತಿಳಿಸಿದರು.

ಅನ್ಯ ಧರ್ಮಗಳಿಗೆ ಹಿಂದೂ ಧರ್ಮದಿಂದ ಮತಾಂತರ ಆಗಿರುವವರನ್ನು ಮತ್ತೆ ಹಿಂದೂ ಧರ್ಮಕ್ಕೆ ಕರೆತರಲು ಹಿಂದೂಗಳು ಪ್ರತಿಜ್ಞೆ ಮಾಡಬೇಕು : ಮೋಹನ್‌‌‌‌ ಭಾಗವತ್‌‌‌  – Vishwanews24