ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ದುರಾಸೆ ನನಗಿಲ್ಲ: ಸಿದ್ದರಾಮಯ್ಯ

Featured, ಜಿಲ್ಲೆ

ಶಿವಮೊಗ್ಗ,: ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವವೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ನನಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟಕ್ಕೆ ಏರಬೇಕೆಂಬ ದುರಾಸೆಯೇನಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಮತ್ತೆ ಆಶೀರ್ವಾದ ಮಾಡಿದರೆ ಆ ಕುರಿತಾದಂತೆ ಮತ್ತೆ ನೋಡಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಉಪಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ. ಮೈತ್ರಿ ಸರ್ಕಾರಕ್ಕೂ, ಉಪ ಚುನಾವಣಾ ಫಲಿತಾಂಶಕ್ಕೂ ಯಾವುದೇ ಸಂಬಂಧವಿಲ್ಲ. ಈ‌ ಸರ್ಕಾರ ಬೀಳುವುದಿಲ್ಲ. ಐದು ವರ್ಷ ಭದ್ರವಾಗಿರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.