ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು: ಬಸವರಾಜ ಬೊಮ್ಮಾಯಿ ಘೋಷಣೆ – Vishwanews24

Featured, ರಾಜ್ಯ ನ್ಯೂಸ್

ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು: ಬಸವರಾಜ ಬೊಮ್ಮಾಯಿ ಘೋಷಣೆ

ತುಮಕೂರು: ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿವಕುಮಾರ ಸ್ವಾಮೀಜಿಗಳು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹಗಳಲ್ಲಿ ಒಂದಾಗಿರುವ ಅನ್ನ ದಾಸೋಹವನ್ನು ಕೂಡ ಮಾಡಿದವರು. ಮಧ್ಯಾಹ್ಯದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತದೆ. ಈ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ತಿಳಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ.

ಶಿವಕುಮಾರ ಸ್ವಾಮೀಜಿಗಳ 115 ಜನ್ಮದಿನ : ಸಿದ್ದಗಂಗಾ ಮಠದಲ್ಲಿ  ಶ್ರೀಗಳ ಗದ್ದುಗೆಯ ದರ್ಶನ ಪಡೆದು ಪೂಜೆ ಸಲ್ಲಿಸಿದ ಅಮಿತ್‌ ಶಾ – Vishwanews24

Leave a Reply