ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು : ಇಂದು ವಿಶ್ವಾಸಮತ ಸಾಬೀತುಗೊಳಿಸ್ತಾರಾ ಕಮಲ್ ನಾಥ್ ?? -Vishwanews24

Featured, ರಾಷ್ಟ್ರ ನ್ಯೂಸ್

ಭೋಪಾಲ್: ಹಲವು ದಿನಗಳ ರಾಜಕೀಯ ಹಗ್ಗಜಗ್ಗಾಟದ ನಂತರ ಇಂದು ವಿಶ್ವಾಸಮತ ಯಾಚನೆಗೆ ಕಮಲ್ ನಾಥ್ ಸರಕಾರ ಸಿದ್ದವಾಗಿದೆ. ಇದಕ್ಕೂ ಮೊದಲು ಕಾಂಗ್ರೆಸ್ ನ 16 ಜನ ಶಾಸಕರು ನೀಡಿದ್ದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.

ಸದ್ಯ ಬೆಂಗಳೂರಿನ ಖಾಸಗಿ ರೆಸಾರ್ಟ್ ನಲ್ಲಿರುವ 16 ಜನ ಬಂಡಾಯ ಕಾಂಗ್ರೆಸ್ ಶಾಸಕರ ರಾಜೀನಾಮೆಯನ್ನು ಮಧ್ಯಪ್ರದೇಶ ಸ್ಪೀಕರ್ ಎನ್ ಪಿ ಪ್ರಜಾಪತಿ ಸ್ವೀಕರಿಸಿದ್ದು, ಇದರೊಂದಿಗೆ ಮಧ್ಯಪ್ರದೇಶ ವಿಧಾನಸಭೆಯ ಸಂಖ್ಯಾಬಲ 206ಕ್ಕೇರಿದೆ.

ಶುಕ್ರವಾರ ಸಂಜೆ 5 ಗಂಟೆಯ ಒಳಗೆ ಬಹುಮತ ಸಾಬೀತುಪಡಿಸುವಂತೆ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.