ಮಳವಳ್ಳಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್ – Vishwanews24

Featured, ರಾಜ್ಯ ನ್ಯೂಸ್

ಮಳವಳ್ಳಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಬಾಲಕಿ ನಿವಾಸಕ್ಕೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹ್ಮದ್ ಖಾನ್ ಭೇಟಿ 

ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ ಪಟ್ಟಣದ ಬಾಲಕಿ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತ ಪ್ರಕರಣ : ಸಾಯುವ ಮುನ್ನ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ : ಸಿಬಿಐ ವರದಿಯಲ್ಲಿ ಉಲ್ಲೇಖ – Vishwanews24

ಬಳಿಕ ಮಾತನಾಡಿದ ಜಮೀರ್ ಖಾನ್, ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು. ಬಾಲಕಿ ಪೋಷಕರ ಗೋಳು ನೋಡಲಾಗುತ್ತಿಲ್ಲ. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಅವನು ಮನುಷ್ಯಲ್ಲ ರಾಕ್ಷಸನಿಗಿಂತ ಹೆಚ್ಚು. ಈಗ ಕಠಿಣ ಕಾನೂನು ತರದಿದ್ರೆ ಈ ರೀತಿಯ ಘಟನೆ ನಡೆಯುತ್ತಲೇ ಇರುತ್ತದೆ. ಈ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ತರಬೇಕು ಎಂದು ಸರ್ಕಾರಕ್ಕೆ ಜಮೀರ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ದೀಪಾವಳಿ ಸಂಭ್ರಮ : ಕರ್ನಾಟಕದಲ್ಲಿ ಈ ಬಾರಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ – Vishwanews24

Leave a Reply