ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ, ಡಿಸಿಎಂ ಅಗಿ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರ -Vishwanews24

Featured, ರಾಷ್ಟ್ರ ನ್ಯೂಸ್

ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ ಶಿಂಧೆ, ಡಿಸಿಎಂ ಅಗಿ ಫಡ್ನವೀಸ್‌ ಪ್ರಮಾಣ ವಚನ ಸ್ವೀಕಾರ -Vishwanews24

ಮುಂಬೈ: ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಇದೀಗ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕಾರ ಮಾಡುವ ಮೂಲಕ ತೆರೆಬಿದ್ದಿದೆ. ಇದೇ ವೇಳೆ ಕೊನೆ ಕ್ಷಣದಲ್ಲಿ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ನಾಳೆ ಶಿವಸೇನೆಯ ಬಂಡಾಯ ನಾಯಕ ಏಕನಾಥ ಶಿಂಧೆ ಅವರ ಸರ್ಕಾರ ಮಹಾರಾಷ್ಟ್ರದಲ್ಲಿ ಆಡಳಿತವನ್ನು ಮುನ್ನಡೆಸಲಿದೆ.

ನಿನ್ನೆ ರಾಜ್ಯಪಾಲರ ಸೂಚನೆಯಂತೆ ಇಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಸಿಎಂ ಆಗಿದ್ದಂತ ಉದ್ಧವ್ ಠಾಕ್ರೆಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಆದ್ರೇ.. ಸುಪ್ರೀಂ ಕೋರ್ಟ್ ಆದೇಶ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು. ಅಲ್ಲದೇ ಎರಡೂವರೆ ವರ್ಷಗಳ ಕಾಲ ತಮಗೆ ಬೆಂಬಲಿಸಿದಂತ ಜನತೆಗೆ ಧನ್ಯವಾದ ಅರ್ಪಿಸಿ, ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು.

ಈ ನಂತ್ರ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರೋ ನಿಟ್ಟಿನಲ್ಲಿ ಚುರುಕಿನ ಪ್ರಕ್ರಿಯೆ ಆರಂಭಗೊಂಡಿತ್ತು. ಯಾರು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವುದೇ ತೀವ್ರ ಕುತೂಹಲ ಮೂಡಿಸಿತ್ತು. ಅಂತಿಮವಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸಿಎಂ ಆಗಲಿದ್ದಾರೆ ಎನ್ನಲಾಗಿತ್ತು. ಆದ್ರೇ ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ ಸಿಕ್ತು. ಸ್ವತಹ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರ ರಾಜಭವನದಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿಯಾಗಿ ಹೊರ ಬಂದ ನಂತ್ರ, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕರಿಸೋದಾಗಿ ಘೋಷಿಸಿದ್ದರು.

ಇದರ ನಡುವೆ ಸಂಜೆ 7.30ಕ್ಕೆ ಮಹಾರಾಷ್ಟ್ರದ ರಾಜಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಶಿವಸೇನೆಯ ರೆಬೆಲ್ ನಾಯಕ ಏಕನಾಥ್ ಶಿಂಧೆ ಅವರು ನೂತನ ಮುಖ್ಯಮಂತ್ರಿಯಾಗಿ ಉಪ ಮುಖ್ಯಮಂತ್ರಿಯಾಗಿ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಈ ಮೂಲಕ ಶಿವಸೇನೆಯ ರೆಬೆಲ್ ನಾಯಕ ಮಹಾ ಸಿಎಂ ಪಟ್ಟಕ್ಕೇರಿದರು. ಅಲ್ಲದೇ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ಏರುವ ಮೂಲಕ ಹೊಸ ದಾಖಲೆ ಬರೆದರು.

 

 

Leave a Reply