ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 96ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿ ಪ್ರಮುಖ ಗಣ್ಯರ ನಮನ -Vishwanews24
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 96ನೇ ಜನ್ಮದಿನ : ಪ್ರಧಾನಿ ಮೋದಿ ಸೇರಿ ಪ್ರಮುಖ ಗಣ್ಯರ ನಮನ -Vishwanews24
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಪ್ರಮುಖ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು.
ಅಜಾತಶತ್ರು’ ನಾಯಕನ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಸೇರಿದಂತೆ ಗಣ್ಯರು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದ ಬಳಿ ನಿರ್ಮಾಣ ಮಾಡಿರುವ ಸದೈವ್ ಅಟಲ್ ಸ್ಮಾರಕಕ್ಕೆ ಪ್ರಧಾನಿ ಮೋದಿ ಸಹಿತ ಗಣ್ಯರು ತೆರಳಿ ವಾಜಪೇಯಿ ಸಮಾಧಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
