ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಇನ್ನು ಮುಂದೆ ಶಿಕ್ಷಣ ಸಚಿವಾಲಯ : ರಾಷ್ಟ್ರಪತಿಗಳಿಂದ ಅಂಕಿತ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯವಾಗಿ ಮರುನಾಮಕರಣ ಮಾಡುವ ಕೇಂದ್ರ ಸಚಿವ ಸಂಪುಟದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ಅಂಕಿತ ಹಾಕಿದ್ದಾರೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಕರಡಿನಲ್ಲಿ ಪ್ರಸ್ತಾಪಿಸಲಾಗಿದ್ದ ಪ್ರಮುಖ ಶಿಫಾರಸ್ಸುಗಳಲ್ಲಿ ಸಚಿವಾಲಯದ ಹೆಸರು ಮರುನಾಮಕರಣವೂ ಸೇರಿತ್ತು. ಪ್ರಸ್ತಾಪನನೆಗೆ ಕೇಂದ್ರ ಸಚಿವ ಸಂಪುಟ ಕಳೆದ ತಿಂಗಳು ಅನುಮೋದನೆ ನೀಡಿತ್ತು.

ಸೋಮವಾರ ರಾತ್ರಿ ಪ್ರಕಟಿಸಲಾಗಿರುವ ಗೆಜೆಟೆಡ್ ನೋಟಿಫಿಕೇಷನ್ ನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯವಾಗಿ ಬದಲಿಸಲು ರಾಷ್ಟ್ರಪತಿ ಒಪ್ಪಿಗೆ ನೀಡಿರುವುದಾಗಿ ತಿಳಿಸಲಾಗಿದೆ.

1985ರಲ್ಲಿ ಅಂದಿನ ಪ್ರಧಾನಿ ರಾಜೀವ್‌ ಗಾಂಧಿ ಅವರ ಆಡಳಿತಾವಧಿಯಲ್ಲಿ ‘ಶಿಕ್ಷಣ ಸಚಿವಾಲಯವು’ ಮಾನವ ಸಂಪನ್ಮೂಲ ಸಚಿವಾಲಯವಾಗಿ ಬದಲಾಗಿತ್ತು