ಮಾ.20ರಂದು ರಾಹುಲ್ ಗಾಂಧಿ ಜಿಲ್ಲೆಗೆ ಭೇಟಿ : ಸಚಿವ ರಮಾನಾಥ ರೈ ನೇತೃತ್ವದಲ್ಲಿ ಸುಳ್ಯದಲ್ಲಿ ಕಾಂಗ್ರೆಸ್ ಸಭೆ

ದಕ್ಷಿಣ ಕನ್ನಡ

ಸುಳ್ಯ , ಮಾರ್ಚ್ 16 : ಎ.ಐ.ಸಿ.ಸಿ ಅಧ್ಯಕ್ಷರಾದ ಬಳಿಕ ರಾಹುಲ್ ಗಾಂಧಿಯವರು ಜಿಲ್ಲೆಗೆ ಆಗಮಿಸಿ ಮಾ. 20ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯ ಸರಕಾರದ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಬಿ. ರಮಾನಾಥ ರೈ ರಾಹುಲ್‍ಗಾಂಧಿಯವರು ಎ.ಐ.ಸಿ.ಸಿ ಅದ್ಯಕ್ಷರಾದ ಬಳಿಕ ಜಿಲ್ಲೆಗೆ ಪ್ರಥಮವಾಗಿ ಆಗಮಿಸುತ್ತಿದ್ದಾರೆ. ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಮೋದಿ ಅಲೆ ಕಡಿಮೆ ಆಗಿದೆ. ಮೋದಿ ಮೋದಿ ಎಂದು ಜೈಕಾರ ಹಾಕುತ್ತಿದ್ದವರು ಈಗ ಹೋಗಿ
ಹೋಗಿ ಎನ್ನುತ್ತಿದ್ದಾರೆ, ದೇಶದಲ್ಲಿ ನಡೆದ 13 ಉಪ ಚುನಾವಣೆಗಳಲ್ಲಿ ಬಿಜೆಪಿ ಸೋತು ಹೋಗಿದೆ. ಇದರಿಂದ ಮೋದಿಯ ಅಲೆ ಎಷ್ಟಿದೆ ಎಂದು ತಿಳಿಯುತ್ತಿದೆ. ರಾಹುಲ್ ಕಾರ್ಯಕ್ರಮಕ್ಕೆ ಸುಳ್ಯದಿಂದ 15000 ಜನ ಭಾಗವಹಿಸುತ್ತಿದ್ದಾರೆ. ಮಂಗಳೂರಿನ ಮುಖ್ಯ ರಸ್ತೆಗಳಲ್ಲಿ ರಾಹುಲ್‍ ಗಾಂಧಿಯವರ ರೋಡ್ ಶೋ ನಡೆಯಲಿದೆ. ಜಿಲ್ಲೆಯ ಮೂಲೆ ಮೂಲೆಗಳಿಂದ ಕಾರ್ಯಕರ್ತರು, ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಯು.ಬಿ. ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸವಿತಾ ರಮೇಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲಿನಿ ಪಿಂಟೋ,  ಕವಿತಾ, ಮಾಜಿ ಮೇಯರ್ ಜೆಸಿಂತಾ ಆಲ್ಫ್ರೆಡ್, ಗೀತಾ ಸುವರ್ಣ, ಜಿಲ್ಲಾ ಉಸ್ತುವಾರಿ ವೇದನಾಥ ಸುವರ್ಣ, ಮಹೇಶ್ ರೈ, ಕೆಪಿಸಿಸಿ ಸದಸ್ಯ ಡಾ| ರಘು, ಜಿ.ಪಂ ಸದಸ್ಯ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟ ಜಯರಾಮ್, ಮಹಮ್ಮದ್ ಕುಂಞ ಗೂನಡ್ಕ ಸುಳ್ಯ ಬ್ಲಾಕ್ ಕಾಂಗ್ರೆಸ್ ಪಧಾಧಿಕಾರಿಗಳು, ವಿವಿಧ ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.