ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ನಡೆಯದು : ಈಶ್ವರ್ ಖಂಡ್ರೆ

Featured, ಜಿಲ್ಲೆ

ತುಮಕೂರು : ಪ್ರಧಾನಿ ಮೋದಿಯವರ ಪ್ರಭಾವ ಕುಗ್ಗಿ ಹೋಗಿದ್ದು, 2019 ರ ಚುನಾವಣೆಯಲ್ಲಿ ಮೋದಿ ಅವರ ಮೋಡಿ ನಡೆಯುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಸಿದ್ದಗಂಗಾ ಮಠಕ್ಕೆ ಭಾನುವಾರ ಭೇಟಿ ನೀಡಿ ಶ್ರೀ ಡಾ. ಶಿವಕುಮಾರಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಮಾತನಾಡಿದ ಅವರು, ಇಂದಿನಿಂದ ರಾಜ್ಯಾದ್ಯಂತ ಪಕ್ಷ ಸಂಘಟಿಸಲಾಗುವುದು ಎಂದು ತಿಳಿಸಿದರು.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ವಿಷಯದಲ್ಲಿ ಪಕ್ಷದ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಬದ್ಧ, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅನಿವಾರ್ಯ ಹಾಗೂ ಇತ್ತು ಎಂದರು.