ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ : ಬ್ರಹ್ಮಾಂಡ ಗುರೂಜಿ ಭವಿಷ್ಯ -Vishwanews24
ಹಾಸನ: ಎರಡನೇ ಬಾರಿ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಗೆ ದೊಡ್ಡ ಕಂಟಕ ಎದುರಾಗಲಿದೆ. ಇದೇ ನವೆಂಬರ್ 4ರಿಂದ ಸಂಕ್ರಾಂತಿವರೆಗೆ ಮೋದಿಗೆ ಸಮಯ ಸರಿಯಿಲ್ಲ. ಅವರಿಗೆ ಕಷ್ಟ ಎದುರಾಗಲಿದೆ ಎಂದು ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದಿದ್ದಾರೆ..
ಬರುವ ನವೆಂಬರ್ 4ರಿಂದ ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಇದೆ. ಅವರು ಈ ಅವಧಿಯಲ್ಲಿ ಅಪಮೃತ್ಯು ಗಂಡಾಂತರದಿಂದ ಪಾರಾದರೆ ಇನ್ನೂ ಎರಡೂ ಮುಕ್ಕಾಲು ವರ್ಷ ಪ್ರಧಾನಿಯಾಗಿ ಇರುತ್ತಾರೆ ಎಂದು ಬ್ರಹ್ಮಾಂಡ ಗುರೂಜಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ರಾಜ್ಯ ರಾಜಕಾರಣ ಬಗ್ಗೆಯೂ ಭವಿಷ್ಯ ನುಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಇದ್ದವರು ಯಾರೂ ಮುಖ್ಯಮಂತ್ರಿ ಆಗೋದಿಲ್ಲ. ಹೊಸ ಸರ್ಕಾರ ಬಂದರೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರಿಗೆ ಪೂರ್ಣ ಅವಧಿಗೆ ಸಿಎಂ ಆಗಿರುವ ಅವಕಾಶ ಇಲ್ಲವೇ ಇಲ್ಲ. ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದರು.
ನವೆಂಬರ್ 4ರ ಬಳಿಕ ಎರಡು ದೊಡ್ಡ ಗ್ರಹಗಳು ಒಂದೆಡೆ ಸೇರಲಿವೆ. ರಾಜ್ಯದಲ್ಲಿ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಕಷ್ಟ ಎದುರಾಗಲಿದೆ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಅವಧಿಯನ್ನು ಪೂರೈಸುವುದಿಲ್ಲ. ಅವರ ಬಳಿಕ ಹೊಸಬರು ರಾಜ್ಯದ ಸಿಎಂ ಆಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದರು
ಡಿ.ಕೆ.ಶಿವಕುಮಾರ್ ಅವರು, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿಯಾಗೋದು ನಿಶ್ಚಿತ. 10 ವರ್ಷಗಳಲ್ಲಿ ಐದು ವರ್ಷ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.
ಹಾಗೇ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತವೆ. ಆಹಾರದ ಬೆಲೆ ಏರುತ್ತದೆ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಬ್ರಹ್ಮಾಂಡ ಗುರೂಜಿ ಹೇಳಿದರು.
