ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ – vishwanews24
ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ ಅಸ್ತವ್ಯಸ್ತ: ಆರೆಂಜ್ ಅಲರ್ಟ್ ಘೋಷಣೆ
ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ 24 ಗಂಟೆಯಲ್ಲಿ 150 ಮಿಲಿ ಮೀಟರ್ ಮಳೆಯಾಗಿದೆ ಎಂದು ವರದಿ ತಿಳಿಸಿದೆ. ಇದರ ನಡುವೆ ಪಶ್ಚಿಮ ಉಪನಗರದ ಚಾಂದಿವಲಿಯಲ್ಲಿ ತೆರೆದ ಮ್ಯಾನ್ಹೋಲ್ಗೆ ಬಿದ್ದು 55 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟರೆ ಪಾಲ್ಘರ್ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ನಡುವೆ ಮೀನುಗಾರಿಕೆಗೆ ತೆರಳಿದ್ದ ಇಬ್ಬರ ಪೈಕಿ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಭಾರಿ ಮಳೆಯಿಂದಾಗಿ ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬಯಿಯ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ತಗೊಂಡಿದೆ. ಕಣ್ಣೆದುರೇ ಕಣ್ಮರೆ ಚಾಂದಿವಲಿ ವ್ಯಾಪ್ತಿಯ ಖೈರಾನಿ ರಸ್ತೆಯಲ್ಲಿನ ತೆರೆದ ಮ್ಯಾನ್ಹೋಲ್ಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಅಸ್ಲಾಂ ಈಸಾಫ್ ಶೇಖ್ (55) ಎಂದು ಗುರುತಿಸಲಾಗಿದೆ.
ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24
ಮೊಬೈಲ್ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಅಸ್ಲಾಂ, ಅಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ಒಂದರ ಪಕ್ಕದಿಂದ ಸಾಗುತ್ತಿದ್ದಾಗ ರಸ್ತೆಯಲ್ಲಿದ್ದ ತೆರೆದ ಮ್ಯಾನ್ಹೋಲ್ಗೆ ಹಠಾತ್ ಆಗಿ ಬಿದ್ದು ಕೊಚ್ಚಿ ಹೋಗಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಗುತ್ತಿಗೆ ಕಾರ್ಮಿಕರು ದುರಸ್ತಿ ಕಾರ್ಯಕ್ಕಾಗಿ ಮ್ಯಾನ್ಹೋಲ್ ಮುಚ್ಚಳವನ್ನು ತಾತ್ಕಾಲಿಕವಾಗಿ ತೆರೆದಿದ್ದರು ಎನ್ನಲಾಗಿದೆ.
ಮಳೆಯಿಂದಾಗಿ ರೈಲ್ವೇ ಹಳಿಗಳ ಮೇಲೆ ನೀರು ನಿಂತಿದ್ದರಿಂದ ಮುಂಜಾನೆಯ ದಟ್ಟಣೆ ಅವಧಿಯಲ್ಲಿ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯಾಯಿತು. ಹೆಚ್ಚಿನ ರೈಲುಗಳು 10ರಿಂದ 15 ನಿಮಿಷ ತಡವಾಗಿ ಧಾವಿಸುತ್ತಿದ್ದ ಕಾರಣ ನಿಲ್ದಾಣಗಳಲ್ಲಿ ಭಾರಿ ಜನದಟ್ಟಣೆ ಕಂಡುಬಂದಿತು.
ಬೆಳ್ತಂಗಡಿ: ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24
ಮಧ್ಯಾಹ್ನದ ವೇಳೆಗೆ ಮಳೆ ಕೊಂಚ ಬಿಡುವು ನೀಡಿದೆಯಾದರೂ, ಭಾರತೀಯ ಹವಾಮಾನ ಇಲಾಖೆ ಮುಂಬಯಿ ಮತ್ತು ಅದರ ಉಪನಗರಗಳಲ್ಲಿ ಗುರುವಾರ ರಾತ್ರಿ ಹಾಗೂ ಶುಕ್ರವಾರ ಮುಂಜಾನೆ ಧಾರಾಕಾರ ಮಳೆ ಸುರಿದಿದೆ ಎಂದು ವರದಿ ತಿಳಿಸಿದೆ
