ಮುಂಬೈ : ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಮಗಳು ಪೊಲೀಸರ ವಶಕ್ಕೆ – Vishwanews24

Featured, ರಾಷ್ಟ್ರ ನ್ಯೂಸ್

ಮುಂಬೈ : ಪ್ಲಾಸ್ಟಿಕ್ ಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ – ಮಗಳು ಪೊಲೀಸರ ವಶಕ್ಕೆ

ಮುಂಬೈ (ಮಹಾರಾಷ್ಟ್ರ) : ಇಲ್ಲಿನ ಲಾಲ್‌ಬಾಗ್ ಪ್ರದೇಶದಲ್ಲಿ 53 ವರ್ಷದ ಮಹಿಳೆಯ ಕೊಳೆತ ಶವ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿದೆ ಎಂದು ಬುಧವಾರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮೃತ ಮಹಿಳೆಯ 22 ವರ್ಷದ ಮಗಳನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಲಾಲ್‌ಬಾಗ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ 53 ವರ್ಷದ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಮೃತ ಮಹಿಳೆಯ 22 ವರ್ಷದ ಮಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ’ ಎಂದು ಡಿಸಿಪಿ ಪ್ರವೀಣ್ ಮುಂಡೆ ತಿಳಿಸಿದ್ದಾರೆ. ಪೊಲೀಸರು ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ತನಿಖೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ರಾಜ್ಯ ಸರ್ಕಾರದಿಂದ ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ : ಮಾ.21 ಕ್ಕೆ 10 ಸಾವಿರ ಫಲಾನುಭವಿಗಳಿಗೆ ಮನೆ ಹಸ್ತಾಂತರ – Vishwanews24

Leave a Reply