ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ತೋರಿಸಿದ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಬಿಎಸ್ ವೈ ಗೆ ದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ವಿಶ್ವಾಸ ಮತ ಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳುಹಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ, ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಅತಿವೃಷ್ಟಿ- ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ಧಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ ಎಂಬುದಾಗಿ ಶನಿವಾರ ತಮ್ಮ ಟ್ವೀಟ್ ಖಾತೆ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬಿಎಸ್ ಯಡಿಯೂರಪ್ಪ ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತಿವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ ಎಂದು ಪ್ರಶ್ನಿಸಿದ್ದಾರೆ.