ಮುಡಾ ಕೇಸ್ ರಾಜಕೀಯ ಪ್ರೇರಿತ , ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ : ಪರಮೇಶ್ವರ್ – vishwanews24

Featured, ರಾಜ್ಯ ನ್ಯೂಸ್

ಮುಡಾ ಕೇಸ್ ರಾಜಕೀಯ ಪ್ರೇರಿತ , ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ : ಪರಮೇಶ್ವರ್

ಬೆಂಗಳೂರು: ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದು, ನಾವು ಯಾವಾಗಲು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಕೇಸ್‌ನ್ನು ಸಿಬಿಐಗೆ ಕೊಡುವ ವಿಚಾರವಾಗಿ ಮೊದಲು ಹೈಕೋರ್ಟ್‌ನಲ್ಲಿ ಆದೇಶ ಬರಲಿ. ಆದೇಶ ಬಂದ ಮೇಲೆ ಗೊತ್ತಾಗುತ್ತದೆ. ಬರುವವರೆಗೂ ಕಾಯೋಣ, ಬಂದ ಮೇಲೆ ಮುಂದಿನ ಚರ್ಚೆ ಮಾಡೋಣ. ಮುಡಾ ಕೇಸ್ ರಾಜಕೀಯ ಪ್ರೇರಿತ ಎಂದು ಮೊದಲ ದಿನದಿಂದ ಹೇಳುತ್ತಿದ್ದೇವೆ. ರಾಜಕೀಯ ದುರುದ್ದೇಶ ಇಟ್ಟುಕೊಂಡು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ನಾವೆಲ್ಲರು ಸಿದ್ದರಾಮಯ್ಯ ಪರ ನಿಂತುಕೊಳ್ತೀವಿ. ಅದರಲ್ಲಿ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕಾಪು: ಪುರಸಭೆಯ ಸಾಮಾನ್ಯ ಸಭೆಯಲ್ಲಿ ವಿವಿಧ ಯೋಜನೆಗಳ ಕುರಿತು ಚರ್ಚೆ – vishwanews24

 

Leave a Reply