ಮುಡಾ ಪ್ರಕರಣ : ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್ – vishwanews24

Featured, ರಾಜ್ಯ ನ್ಯೂಸ್

ಮುಡಾ ಪ್ರಕರಣ : ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ(CBI)ಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ (ನ.05) ನಡೆಸಿದ ಹೈಕೋರ್ಟ್‌, ನವೆಂಬರ್‌ 25ರವರೆಗೆ ನಡೆದ ತನಿಖೆಯ ವಿವರ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿ, ನ.26ಕ್ಕೆ ವಿಚಾರಣೆ ಮುಂದೂಡಿದೆ.

ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಇಂದು ಹೈಕೋರ್ಟ್‌ ನಡೆಸಿದೆ. ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ. ರಾಘವನ್‌ ವಾದ ಮಂಡಿಸಿ, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಮನವಿ ಮಾಡಿದರು.

ಮುಡಾ ಹಗರಣ: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ – vishwanews24

ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿ, ನ.25ರವರೆಗೆ ನಡೆದ ತನಿಖೆಯ ವಿವರ ಒದಗಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿ, ಸಿಬಿಐ ಮತ್ತು ಲೋಕಾಯುಕ್ತ ಪೊಲೀಸರಿಗೆ ನೋಟಿಸ್‌ ಜಾರಿಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಕಾಲಾವಕಾಶ ನೀಡಬೇಕೆಂದು ರಾಜ್ಯ ಅಭಿಯೋಜಕ ಬಿ.ಎನ್.ಜಗದೀಶ್‌ ಅವರು ಮನವಿ ಮಾಡಿಕೊಂಡರು. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ದೇವರಾಜುಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಮಣಿಪಾಲ : ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ – vishwanews24

Leave a Reply