ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಇಡಿ ನೋಟಿಸ್​ – vishwanews24

Featured, ರಾಜ್ಯ ನ್ಯೂಸ್

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್​

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಭೈರತಿ ಸುರೇಶ್ ನೋಟಿಸ್​​ ಜಾರಿ ಮಾಡಿದೆ. ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.

ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ  ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ – vishwanews24

ನೋಟಿಸ್​ನಲ್ಲಿ ಏನಿದೆ?
ಜ 9ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಜನವರಿ 3ರಂದು ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಮೊದಲ ನೋಟಿಸ್ ನೀಡಿತ್ತು. ನೋಟಿಸ್​ಗೆ ಪ್ರತಿಯಾಗಿ ಸಿಎಂ ಪತ್ನಿ ಪಾರ್ವತಿ ದಾಖಲೆ ಸಂಗ್ರಹಿಸಲು ಎರಡು ವಾರ ಕಾಲಾವಕಾಶ ಕೋರಿದ್ದರು. ವಯಸ್ಸಾಗಿರುವುದರಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಮನವಿ ಮಾಡಿದ್ದರು. ಇಡಿ ಸಿಎಂ ಪತ್ನಿಗೆ ಎರಡನೇ ನೋಟಿಸ್ ನೀಡಿತ್ತು. ಜನವರಿ 28ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ನಲ್ಲಿ ಹೇಳಲಾಗಿದೆ.

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ : ಆರ್.ಅಶೋಕ್ – vishwanews24

Leave a Reply