ಮುತಾಲಿಕ್ ರಂತವರನ್ನುಒಳಗೆ ಹಾಕುವ ಮೂಲಕ ರಾಜ್ಯ ಸರ್ಕಾರ ಇಂತಹ ವಿಷ ಬೀಜಗಳನ್ನು ಕಿತ್ತು ಹಾಕಬೇಕು : ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಶಾಂತಿ ಕದಡುವ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ..

ಮೊದಲು ಮುತಾಲಿಕ್ ರಂತವರನ್ನು ಒದ್ದು ಒಳಗೆ ಹಾಕಬೇಕು..

ಬೆಂಗಳೂರು : ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವಿಗೆ ನೀಡಿದ್ದ ಗಡುವು ಇಂದು ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಅಜಾನ್ ಗೆ ಪರ್ಯಾಯವಾಗಿ ಸುಪ್ರಭಾತ, ಹನುಮಾನ್ ಚಾಲೀಸಾ ಪಠಣೆ ಅಭಿಯಾನ ಮಾಡಲಾಗುತ್ತಿದೆ. ಈ ವಿಚಾರವಾಗಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ದ ಕಿಡಿಕಾರಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂತಹವರನ್ನು ಒಳಗೆ ಹಾಕಬೇಕು ಎಂದಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಶಾಂತಿ ಕದಡುವ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮೊದಲು ಮುತಾಲಿಕ್ ರಂತವರನ್ನು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಉಳಿಸೋದು ಕಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊದಲು ಮುತಾಲಿಕ್ ರಂತರನ್ನುಒಳಗೆ ಹಾಕುವ ಮೂಲಕ ರಾಜ್ಯ ಸರ್ಕಾರ ಇಂತಹ ವಿಷ ಬೀಜಗಳನ್ನು ಕಿತ್ತು ಹಾಕಬೇಕು. ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ಬಿಡಬೇಕು. ಇಲ್ಲವಾದರೆ ಸಮಾಜದಲ್ಲಿ ಶಾಂತಿ ಉಳಿಸುವುದು ಕಷ್ಟವಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಇದೇ ವಾರದಲ್ಲಿ SSLC ಪರೀಕ್ಷೆ ಫಲಿತಾಂಶ ಪ್ರಕಟ : ಫಲಿತಾಂಶ ವೀಕ್ಷಿಸಲು ಈ ಕ್ರಮ ಅನುಸರಿಸಿ – Vishwanews24

Leave a Reply