ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

Featured, ಉಡುಪಿ

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್ ಡಿಸೋಜಾ ಪ್ರಿನ್ಸ್ ಪಾಯಿಂಟ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ‌ದಾಳಿ ನಡೆಸಿ ಹತ್ಯೆಗೈದ ಬಗ್ಗೆ ವರದಿ ಆಗಿದೆ.

ಇಂದು ಮಧ್ಯಾಹ್ನ ಡೇವಿಡ್ ಅವರು ತನ್ನ ಮುದರಂಗಡಿಯ ಕಚೇರಿಗೆ ಕಾರಿನಲ್ಲಿ ಇಳಿದು ನಡೆದುಕೊಂಡು ಹೋಗುತ್ತ ಇರುವಾಗ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್ ನಲ್ಲಿ ಎರಡು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಡೇವಿಡ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಗುಂಡಿನ ದಾಳಿಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Leave a Reply