ಮುರಸು ಚಂಡಮಾರುತದ ಪ್ರಭಾವ  : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆಯ ಎಚ್ಚರಿಕೆ – vishwanews24

Featured, ರಾಜ್ಯ ನ್ಯೂಸ್

ಮುರಸು ಚಂಡಮಾರುತ ಪರಿಣಾಮ : ರಾಜ್ಯದಲ್ಲಿ ಮುಂದಿನ 3 ದಿನ ವ್ಯಾಪಕ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಮುರಸು ಚಂಡಮಾರುತ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲೂ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯ ಮುನ್ಸೂಚನೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ತೀವ್ರ ಮಳೆಯಾಗಲಿದೆ. ಮುರಸು ಚಂಡಮಾರುತ ಎಫೆಕ್ಟ್ನಿಂದಾಗಿ ಆಂಧ್ರ, ತಮಿಳುನಾಡು, ಒಡಿಸ್ಸಾ ಹಾಗೂ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಬಿಲ್ಲವ ಯುವ ವೇದಿಕೆಯಿಂದ ಎಸ್ಪಿ – ಉಸ್ತುವಾರಿ ಸಚಿವರಿಗೆ ಮನವಿ – vishwanews24

Leave a Reply